ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅದರಲ್ಲೂ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಮರಾಜನಗರ ಸಂಸದ ಸುನೀಲ್ ಬೋಸ್ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಕುಂಕುಮ ಇಟ್ಟಿದ್ದಾರೆ.
ಆಷಾಢ ಮಾಸದ 3ನೇ ಶುಕ್ರವಾರ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಹಾಗೂ ಸಂಸದ ಸುನೀಲ್ ಬೋಸ್ ಚಾಮುಂಡಿ ಬೆಟ್ಟಕ್ಕೆ ಜೊತೆಯಾಗಿ ಬಂದಿದ್ದರು. ಈ ವೇಳೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸಚಿವ ಎಚ್.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದಾರೆ. ಸದ್ಯ ಈಗ ಇದು ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.
ಇನ್ನು ಸುನೀಲ್ ಬೋಸ್ ಹಾಗೂ ಸವಿತಾ ಅವರ ನಡೆ ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ವೇದಿಕೆ ಕಲ್ಪಿಸಿದೆ.
ಈ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ನಡುವೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸವಿತಾ ಅವರ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.