NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು – ನೌಕರರಲ್ಲಿ ಹಾಗೂ ನೌಕರರು – ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ ಮೊದಲು ನೀವು ಒಗ್ಗೂಡಿ ಎಲ್ಲವೂ ಸಾಧ್ಯವಾಗಲಿದೆ ಎಂದು NWKRTC ನಿಗಮದ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಮತ್ತೊಮ್ಮೆ ಕಿವಿ ಮಾತು ಹೇಳಿದ್ದಾರೆ.
ಬಸವ ಜಯಂತಿ ಅಂಗವಾಗಿ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಆಯೋಜಿಸಿದ್ದ ಬಸವ ಜಯಂತಿ ಉತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಗಲಾದರೂ ಎಲ್ಲರೂ ಒಗ್ಗಟ್ಟಾಗಿಗಿ ಇಲ್ಲದ್ದಿದ್ದರೆ ಯಾವುದೇ ಸಮಸ್ಯೆಗಳು ಬಗೆಹರಿಯುವುದಿಲ್ಲ. ಇನ್ನು ನೀವು ಒಬ್ಬರ ಕಾಲು ಒಬ್ಬರು ಎಳೆದುಕೊಳ್ಳುವ ಜತೆಗೆ ಪೊಲೀಸ್ ಪ್ರಕರಣಗಳನ್ನು ಹಾಕುವುದು. ಇದೆಲ್ಲವನ್ನು ನಾನು ಅಧ್ಯಕ್ಷನಾಗಿ ಬಂದಾಗಿನಿಂದಲೂ ಕಂಡಿದ್ದೀನಿ ಇದನ್ನು ಭಾರಿ ನೋವಿನಿಂದ ಹೇಳುತ್ತಿದ್ದೇನೆ ಎಂದರು.
ಇನ್ನು ಚಾಲನಾ ಸಿಬ್ಬಂದಿಗಳು ಮಾಡದ ತಪ್ಪಿಗೆ ಅಧಿಕಾರಿಗಳು ವಜಾ, ಅಮಾನತು ಮತ್ತು ವರ್ಗಾವಣೆಯಂತ ಶಿಕ್ಷೆ ಕೊಡುತ್ತಿದ್ದಾರೆ. ಬಸ್ ಇಳಿಯುವುದಕ್ಕೆ ಮುಂದಾಗಿ ಯಾರೋ ಬಿದ್ದು ಮೃತಪಟ್ಟರೆ ಇಲ್ಲಿ ಚಾಲನಾ ಸಿಬ್ಬಂದಿಗಳನ್ನು ಹೊಣೆ ಮಾಡಿ ಅಮಾನತು ಮಾಡುತ್ತಾರೆ.
ಅಧಿಕಾರಿಗಳು ಏನೆ ಆದರೂ ನೌಕರರ ಪರ ನಿಲ್ಲಬೇಕು. ಅದನ್ನು ಬಿಟ್ಟು ಅವರ ವಿರುದ್ಧ ನಿಂತರೆ ಅವರ ಪಾಡೇನು. 8ತಾಸು ಹಳ್ಳಿ ಹಳ್ಳಿಗಳಿಗೆ ಸರಿ ಇಲ್ಲದ ಹಳ್ಳ ಕೊಳ್ಳಗಳ ರಸ್ತೆಗಳಲ್ಲಿ ಬಸ್ ಓಡಿಸುತ್ತಾರೆ. ಈ ವೇಳೆ ಜನರು ಅವರನ್ನು ಎಷ್ಟು ರೀತಿ ಬೈದುಕೊಳ್ಳುತ್ತಾರೋ ಗೊತ್ತಿಲ್ಲ. ಆದರೂ ಅವರು ಅದ್ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೆ ಸುರಕ್ಷಿತವಾಗಿ ತಲುಪಿಸುವ ಕೆಲಸ ಮಾಡುತ್ತಾರೆ.
ಇಷ್ಟೆಲ್ಲ ಕಷ್ಟಪಡುವ ನೌಕರರ ಪರವಾಗಿ ನಿಲ್ಲಬೇಕು. ಒಂದು ವೇಳೆ ಸಾವು ನೋವುಗಳಾದಗ ಬಸ್ ಮತ್ತು ಚಾಲನಾ ಸಿಬ್ಬಂದಿಗಳನ್ನು ಕಾನೂನಾತ್ಮಕವಾಗಿ ಬಿಡಿಸಿಕೊಂಡು ಬರಬೇಕು ಎಂಬ ದೃಷ್ಟಿಯಿಂದ ಕಾನೂನು ವಿಭಾಗ ಇದೆ. ಆದರೆ, ಆ ಕಾನೂನು ವಿಭಾಗದ ಅಧಿಕಾರಿಗಳು ಮಾಡುತ್ತಿರುವುದು ಏನು? ನೌಕರರ ವಿರುದ್ಧವೇ ಪ್ರಕರಣ ದಾಖಲಿಸುವುದು. ಬಳಿಕ ಅವರಿಗೆ ಬೇಲ್ ವ್ಯವಸ್ಥೆ ಮಾಡದೆ ನ್ಯಾಯಾಂಗ ಬಂಧನಕ್ಕೆ ಬಿಡುವುದಾ? ಇದು ಮೊದಲು ನಿಲ್ಲಬೇಕು ಎಂದು ಹೇಳಿದರು.

ಇನ್ನು ನಾನು ಅಧ್ಯಕ್ಷನಾಗಿ ಬಂದಾಗಿನಿಂದ ಗಮನಿಸಿದಾಗ ನಮಗೆ ತಿಳಿದು ಬಂದಿದ್ದು ನೌಕರರು ಅಧಿಕಾರಿಗಳಲ್ಲಿ ಒಗ್ಗಟ್ಟಿಲ್ಲದಿರುವುದು ಜತೆಗೆ ನೌಕರರು ನೌಕರರಲ್ಲೇ ಹೊಂದಾಣಿಕೆ ಇಲ್ಲದಿರುವುದರಿಂದ ಪೊಲೀಸ್ ಪ್ರಕರಣಗಳು ದಾಖಲಾಗುತ್ತಿವೆ ಇವೆಲ್ಲವನ್ನು ಬಿಡಬೇಕು. ಇನ್ನು ವೇತನಕ್ಕಾಗಿ ಹೋರಾಟ ಮಾಡಿದ 2500 ನೌಕರರನ್ನು ಅಮಾನತು, ವಜಾ, ವರ್ಗಾವಣೆ ಮಾಡಿದ್ದೇವೆ ಎಂದು ಅಧಿಕಾರಿಗಳು ಖುಷಿಯಿಂದ ಹೇಳುತ್ತಾರೆ ಎಂದರೆ ಅವರ ಮನಸ್ಥಿತಿ ಹೇಗಿದೆ ಎಂಬುವುದು ತಿಳಿಯುತ್ತದೆ ಎಂದು ಹೇಳಿದರು.
ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಸ್ಥೆಯ ನೌಕರರು ವೇತನ ಹೆಚ್ಚಳ ಆಗದಿರುವ ಬಗ್ಗೆ ಅನುಭವಿಸುತ್ತಿರುವ ಸಮಸ್ಯೆಗಳನ್ನು ನಾಟಕ ಪ್ರದರ್ಶನದ ಮೂಲಕ ಭಾರಿ ಅಚ್ಚುಕಟ್ಟಾಗಿ ಸರ್ಕಾರದ ಮನ ಮುಟ್ಟುವಂತೆ ಅಭಿನಯಿಸಿದರು.
ಈ ನಾಟಕವನ್ನು NWKRTC ನಿಗಮದ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಕೂಡ ನೋಡಿದರು. ನೌಕರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಶೀಘ್ರದಲ್ಲೇ ಪರಿಹಾರ ಕೊಡಿಸುವ ಭರವಸೆ ನೀಡಿದರು.
Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...