NEWSಶಿಕ್ಷಣ-

ನಾಗಮಂಗಲ: ಕ್ರೀಡೆಯಿಂದ ದೈಹಿಕ ಮಾನಸಿಕ ಸದೃಢತೆ-ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್

ವಿಜಯಪಥ ಸಮಗ್ರ ಸುದ್ದಿ

ನಾಗಮಂಗಲ: ಕ್ರೀಡೆ ಕೇವಲ ಆಟವಾಗದೆ ಮಕ್ಕಳ ದೈಹಿಕ ಮಾನಸಿಕ ಸದೃಢತೆ ಹಾಗೂ ವ್ಯಕ್ತಿತ್ವ ವಿಕಸನದ ಬೆಸುಗೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಇಂದು ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ತಾಲೂಕಿನಲ್ಲಿ ಪ್ರಥಮವಾಗಿ 2024 -25 ನೇ ಸಾಲಿನ ದೇವಲಾಪುರ ವೃತ್ತದ ಕೆಪಿಎಸ್ ಶಾಲೆಯ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಶಾಲಾ ಅವಧಿಯಲ್ಲಿ ಕೇವಲ ವ್ಯಾಸಂಗ ಆಲೋಚನೆ ಅಲ್ಲದೆ ಅಭ್ಯಾಸದ ಜತೆಗೆ ಕ್ರೀಡೆಯನ್ನ ಒಂದು ಪಠ್ಯವಾಗಿ ಅಳವಡಿಸಿಕೊಂಡು ತಮ್ಮಲ್ಲಿರುವ ಸೂಕ್ತ ಪ್ರತಿಭೆ ಅನಾವರಣಗೊಂಡಾಗ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ. ಸೋಲು ಗೆಲುವುಗಳನ್ನ ಸಮಾನವಾಗಿ ಸ್ವೀಕರಿಸಿ ತಮ್ಮ ಕ್ರೀಡಾ ಪ್ರದರ್ಶನದೊಂದಿಗೆ ಆರೋಗ್ಯ ಮಾನಸಿಕ ದೃಢತೆ ಹಾಗೂ ಸ್ನೇಹ ಪರಂಪರೆಯ ಬೆಸುಗೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ರೀಡೆ ವಿದ್ಯಾರ್ಥಿಗಳು ತಮ್ಮ ತಮ್ಮ ಓದಿನ ಅಂಕಗಳಂತೆ ಕ್ರೀಡಾ ಅಂಕವನ್ನ ಪಡೆಯುಲು ಹಾಗೂ ಕ್ರೀಡಾಕೂಟದಲ್ಲಿ ದೈಹಿಕ ಆರೋಗ್ಯಕರ ಬೆಳವಣಿಗೆಗೆ ಭಾಗವಹಿಸುವ ಮುಖಾಂತರ ತಮ್ಮ ಶಾಲೆ ತಮ್ಮ ತಾಲೂಕು ಜಿಲ್ಲೆಯ ಕೀರ್ತಿ ಬೆಳಗಲು ಉತ್ಸಹಕಾರಾಗಿ ಭಾಗವಹಿಸುವಂತೆ ಕರೆ ನೀಡಿದರು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ಸುರೇಶ್ ವಹಿಸಿದ್ದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರುದ್ರೇಶ್ ಕಾರ್ಯದರ್ಶಿ ಮಂಜೇಗೌಡ ಶಿಕ್ಷಣ ಸಂಯೋಜಕರುಗಳಾದ ಡಿಪಿ ಗಿರೀಶ್ ಸಿದ್ದೇಶ್ ಇದ್ದರು.

ಸಮಾರಂಭದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ರತ್ನಮ್ಮ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಿವ ಸ್ವಾಮಿ, ಉಗ್ರೇಗೌಡ, ದೈಹಿಕ ಶಿಕ್ಷಣ ಪರೀಕ್ಷಕರಾದ ಸುರೇಶ್ ಹಾಗೂ ಶಿಕ್ಷಣ ಸಂಯೋಜಕರುಗಳು ಮತ್ತೆ ಶಾಲಾ ಸಮಿತಿಯ ಸದಸ್ಯರು, ತಾಲೂಕಿನ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಮಂಜುಳಾ ಅವರು ನೆರವೇರಿಸಿದರೆ, ಸಂತೋಷ್ ವಂದಿಸಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು