NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಿವೃತ್ತ ನೌಕರರಿಗೆ ಸನ್ಮಾನ ಹೃದಯ ಸ್ಪರ್ಶಿ ಬೀಳ್ಕೊಡುಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಘಟಕಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರನ್ನು ಡಿಪೋಗಳಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, KSRTC, NWKRTC ಹಾಗೂ KKRTC ನಿಗಮಗಳ ನಿವೃತ್ತ ಚಾಲಕ, ನಿರ್ವಾಹಕರನ್ನು ಜುಲೈ 31ರಂದು ಸನ್ಮಾನಿಸಲಾಯಿತು.

ಕೃಷ್ಣರಾಜಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಪೋನ ನಿವೃತ್ತ ಚಾಲಕ ದಯಾನಂದ ಹಾಗೂ ಘಟಕದ ಸಿಬ್ಬಂದಿ ಮೇಲ್ವಿಚಾರಕ ಅಶ್ವಥ್ ಅವರನ್ನು ಸನ್ಮಾನಿಸಲಾಯಿತು.

ಕೃಷ್ಣರಾಜಪೇಟೆ: ಪಟ್ಟಣದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಪೋನಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ಹಾಗೂ ಘಟಕದ ಸಿಬ್ಬಂದಿ ಮೇಲ್ವಿಚಾರಕ ಅಶ್ವಥ್ ಅವರು ಮಂಡ್ಯ ಘಟಕಕ್ಕೆ ವರ್ಗಾವಣೆಗೊಂಡಿದ್ದರಿಂದ ಘಟಕದ ಸಿಬ್ಬಂದಿಗಳು ಹೃದಯಸ್ಪರ್ಶಿ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು.

ಕೆ.ಆರ್.ಪೇಟೆ ಬಸ್ ಡಿಪೋನಲ್ಲಿ ಏಳು ವರ್ಷಗಳಿಂದ ಸಿಬ್ಬಂದಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಥ್ ತಮ್ಮ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹಾಗೂ ಕಾರ್ಯದಕ್ಷತೆಯಿಂದ ಸಹೋದ್ಯೋಗಿಗಳಿಗೆ ಸ್ನೇಹ ಮಹಿಯಾಗಿದ್ದಾರೆ.

ಇನ್ನು ಕಳೆದ 35ವರ್ಷಗಳಿಂದ ಚಾಲಕ ಬೋಧಕರಾಗಿ ಅಪಘಾತರಹಿತವಾಗಿ ಬಸ್ ಚಾಲಕರಾಗಿ ಸೇವೆ ಸಲ್ಲಿಸಿ ಬಸ್ ಡಿಪೋನಲ್ಲಿ ಸಿಬ್ಬಂದಿಗಳಿಗೆ ಹಿರಿಯಣ್ಣನಂತಿದ್ದ ದಯಾನಂದ ಅವರು ಸೇವಾ ನಿವೃತ್ತರಾದ ಹಿನ್ನೆಲೆಯಲ್ಲಿ ಹೃದಯ ಸ್ಪರ್ಶಿ ಬೀಳ್ಕೊಡಲಾಯಿತು.

ಬಸ್ ಡಿಪೋ ಸಿಬ್ಬಂದಿಗಳು, ಚಾಲಕ ನಿರ್ವಾಹಕರು ಸೇರಿದಂತೆ ಸಾರ್ವಜನಿಕರು ಹಾಗೂ ಸ್ನೇಹಿತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನಿಸಿ ಗೌರವಿಸಿ ಶುಭಕೋರಿ ಬೀಳ್ಕೊಟ್ಟರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ