CRIMENEWSಸಿನಿಪಥ

‘ಭಜರಂಗಿ’ ನಟಿ ರುಕ್ಮಿಣಿಯ ₹10ಲಕ್ಷದ ಡೈಮಂಡ್ ರಿಂಗ್, ₹9ಲಕ್ಷ ಮೌಲ್ಯದ ರೋಲೆಕ್ಸ್ ವಾಚ್‌ ಕದ್ದ ಕ್ಯಾಬ್‌ ಚಾಲಕ ಸೆರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ‘ಭಜರಂಗಿ’ ಖ್ಯಾತಿಯ ನಟಿ ರುಕ್ಮಿಣಿ ವಿಜಯಕುಮಾರ್ ಅವರ 10 ಲಕ್ಷ ರೂ. ಮೌಲ್ಯದ ವಜ್ರದ ಉಂಗುರ ಮತ್ತು 9 ಲಕ್ಷ ಮೌಲ್ಯದ ರಿಂಗ್‌ ಕದ್ದ ಆರೋಪಿ ಕ್ಯಾಬ್‌ ಚಾಲಕ ಮೊಹಮ್ಮದ್ ಮಸ್ತಾನ್‌ನನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದು, ಕದ್ದ ವಸ್ತುಗಳನ್ನು ವಶಕೆ ಪಡೆದುಕೊಂಡಿದ್ದಾರೆ.

ಮೇ 11 ರಂದು ಬೆಳಗ್ಗೆ ನಟಿ ವಾಕಿಂಗೆಂದು ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಸಂಖ್ಯೆ 18 ರ ಬಳಿ ರುಕ್ಮಿಣಿ ತನ್ನ ಕಾರನ್ನು ನಿಲ್ಲಿಸಿದ್ದರು. ಅವರು ತಮ್ಮ ಕಾರಿನೊಳಗೆ ದುಬಾರಿ ಬೆಲೆಯ ಹ್ಯಾಂಡ್‌ಬ್ಯಾಗ್, ಪರ್ಸ್, ಎರಡು ವಜ್ರದ ಉಂಗುರಗಳು ಮತ್ತು ರೋಲೆಕ್ಸ್ ವಾಚ್‌ಅನ್ನು ಬಿಟ್ಟು ಹೋಗಿದ್ದರು.

ಈ ವೇಳೆ ಅವರು ವಾಕಿಂಗೆ ಹೋಗುವ ಭರದಲ್ಲಿ ತಮ್ಮ ಕಾರನ್ನು ಲಾಕ್ ಮಾಡಲು ಮರೆತಿದ್ದರು. ಇದನ್ನು ಗಮನಿಸಿದ ಕ್ಯಾಬ್ ಚಾಲಕ ಮೊಹಮ್ಮದ್ ಕಾರಿನೊಳಗಿನ ವಸ್ತುಗಳನ್ನು ಕದ್ದು ಪರಾರಿಯಾಗಿದ್ದ, ಸದ್ಯ ಈಗ ಬ್ಯಾಗ್‌ ಸೇರಿದಂತೆ ದುಬಾರಿ ವಸ್ತುಗಳನ್ನು ಕದ್ದ ಮೊಹಮ್ಮದ್ ಪೊಲೀಸರ ಅತಿಥಿಯಾಗಿದ್ದಾನೆ.

ಇನ್ನು ಅಂದು ಅಂದರೆ ಮೇ 11ರಂದು ಘಟನೆ ನಡೆದ ತಕ್ಷಣ ನಟಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಪೊಲೀಸರು ಕಳ್ಳನ ಪತ್ತೆ ಕಾರ್ಯ ಆರಂಭಿಸಿದರು. ಮೂರೇ ದಿನದಲ್ಲೇ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ಕದ್ದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ 1,50,000 ರೂ. ಮೌಲ್ಯದ ಬ್ಯಾಗ್, 75,000 ರೂ. ಮೌಲ್ಯದ ಪರ್ಸ್, 10 ಲಕ್ಷ ರೂ. ಮೌಲ್ಯದ ಡಬಲ್ ಬ್ಯಾಂಡೆಡ್ ಡೈಮಂಡ್ ರಿಂಗ್, 9 ಲಕ್ಷ ರೂ. ಮೌಲ್ಯದ ರೋಲೆಕ್ಸ್ ವಾಚ್ ಮತ್ತು 3 ಲಕ್ಷ ರೂ. ಮೌಲ್ಯದ ಡೈಮಂಡ್ ರಿಂಗ್ ಸೇರಿದಂತೆ ಒಟ್ಟು 23 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದಿದ್ದ.

ಇನ್ನು ನಟಿ ರುಕ್ಮಿಣಿ ವಿಜಯಕುಮಾರ್ ಅವರು ಶಿವಣ್ಣನ ಭಜರಂಗಿ ಚಿತ್ರದಲ್ಲಿ ರುಕ್ಮಿಣಿ ಕೃಷ್ಣನ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು ತಮಿಳು ಚಿತ್ರಗಳಾದ ಕೊಚ್ಚಡಿಯಾನ್ ಮತ್ತು ಹಿಂದಿ ಚಿತ್ರಗಳಾದ ಶಮಿತಾಭ್‌ನಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...