NEWSದೇಶ-ವಿದೇಶನಮ್ಮರಾಜ್ಯ

ದೆಹಲಿಯ ಜಂತರ್ ಮಂತರ್‌ನಲ್ಲಿ ಇಪಿಎಸ್ ಪಿಂಚಣಿದಾರರ ಬೃಹತ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ ಮಾಡಿದರು.

ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾವತ್ ಅವರ ನೇತೃತ್ವದಲ್ಲಿ ಜುಲೈ 31 ಮತ್ತು ಆಗಸ್ಟ್ ಒಂದರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಜರುಗಿದ್ದು, ದೇಶಾದ್ಯಂತ ಇರುವ ಸಾವಿರಾರು ಇಪಿಎಸ್ ಪಿಂಚಣಿದಾರರು ಭಾಗವಹಿಸಿ ಈ ಇಳಿಯ ವಯಸ್ಸಿನಲ್ಲೂ ಒಗ್ಗಟ್ಟು ಪ್ರದರ್ಶಿಸಿದರು.

ತಾವೆಲ್ಲರೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೀರಿ ಈ ಹಿಂದೆ ನಡೆದ ಹೋರಾಟಕ್ಕೂ ಗುರುವಾರ ನಡೆದ ಹೋರಾಟಕ್ಕೂ ಅಜಗಜಾಂತರ ವ್ಯತ್ಯಾಸವಿರುವುದನ್ನು ಈ ವೇಳೆ ತಾವೆಲ್ಲರೂ ಸಹ ಗಮನಿಸಿದ್ದೀರಿ. ಈ ಪ್ರತಿಭಟನಾ ಹೋರಾಟ ದೇಶದ ಪ್ರಧಾನಿಯವರಿಗೆ ತಲುಪುತ್ತಿದೆ. ನಮ್ಮ ಸಹನೆಯ ಕಟ್ಟೆ ಒಡೆದು ಆಕ್ರೋಶದ (akroshada)ವನ್ನು ಸರ್ಕಾರ ಗಮನಿಸುತ್ತಿದೆ. ಹೀಗಾಗಿ ನಮ್ಮ ಬೇಡಿಕೆ ಈಡೇರಿಸಲೇಬೇಕು ಎಂದು ಸಮಸ್ತ ಪ್ರತಿಭಟನ ನಿರತರು ಆಗ್ರಹಿಸಿದರು.

ಇನ್ನು ನಿವೃತ್ತರ ಜೇಂಕಾರದ ಘೋಷಣೆ, ಜಂತರ್ ಮಂತರ್ ಆವರಣದಲ್ಲಿ ಮಾರ್ಧನಿಸಿತು. ಪ್ರತಿಭಟನಾ ಹೋರಾಟದಲ್ಲಿ ಸುಮಾರು 11 ಜನ ವಿವಿಧ ಪಕ್ಷಗಳ ಸಂಸದರು ಪಕ್ಷ ಭೇದ ಮರೆತು ಭಾಗವಹಿಸಿ ಮಾತನಾಡಿದ್ದು, ಇಪಿಎಸ್ ನಿವೃತ್ತರಲ್ಲಿ ಸಂತಸ ಮೂಡಿಸಿದೆ.

ಈ ಹಿಂದಿನ ಭರವಸೆಗಳೆಲ್ಲ ಪೊಳ್ಳಾಗಿದ್ದು, ಈಗಾಗಲೇ ಭರವಸೆ ನೀಡಿದ್ದವರ ಅರ್ಧ ಅಧಿಕಾರ ಹೋಗಿದೆ. ಮತ್ತೆ ನಮ್ಮನ್ನು ನಿರ್ಲಕ್ಷಿಸಿದರೆ, ಇದೇ 2024ರಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅವರು ತಮ್ಮ ಪೂರ್ಣ ಅಧಿಕಾರವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಗುಡುಗಿದೆ.

ಇನ್ನು ಈ ಪ್ರತಿಭಟನಾ ಹೋರಾಟದಲ್ಲಿ ನಾಲ್ಕು ರಾಜ್ಯಗಳಿಂದ ಆಗಮಿಸಿದ್ದ ನಿವೃತ್ತರು ವೇದಿಕೆಯಲ್ಲಿ ಶಪತ ಮಾಡಿದ್ದು, ಈಗಾಗಲೇ ಕೇಂದ್ರ ಸರ್ಕಾರಕ್ಕೆ ಈ ಸಂದೇಶ ರವಾನೆಯಾಗಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂಪೂರ್ಣ ವಿವರವನ್ನು ಇದೇ ಆ.4ರ ಭಾನುವಾರದಂದು ಲಾಲ್ ಬಾಗ್ ಆವರಣದಲ್ಲಿ ಹಮ್ಮಿಕೊಂಡಿರುವ 79ನೇ ಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆಯಲ್ಲಿ ಚರ್ಚಿಸಲಾಗುವುದು. ಮಾತ್ರವಲ್ಲದೆ ಕನಿಷ್ಠ ಪಿಂಚಣಿ ಹಾಗೂ ಹೆಚ್ಚುವರಿ ಪಿಂಚಣಿ ಈ ಎರಡು ಅಂಶಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಎನ್ಎಸಿ ಮುಖ್ಯ ಸಂಯೋಜಕರಾ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿ ಅವರು ಇಪಿಎಸ್ ನಿವೃತ್ತರ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಸಭೆಯಲ್ಲಿ ವಿವರಿಸಲಿದ್ದಾರೆ. ಹೀಗಾಗಿ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಅದಕ್ಕೆ ಅಂದು ಬೆಳಗ್ಗೆ 8 ಗಂಟೆಗೆ ಹಾಜರಾಗಬೇಕು ಎಂದು ನಂಜುಂಡೇಗೌಡ ವಿನಂತಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು