NEWSದೇಶ-ವಿದೇಶನಮ್ಮರಾಜ್ಯ

ಕನಿಷ್ಠ ಮಾಸಿಕ 7,500 ರೂ. ಪಿಂಚಣಿ ಕೊಡಲು ಪರಿಶೀಲನೆ: ಕೇಂದ್ರ ಸರ್ಕಾರ ಭರವಸೆ – EPS ಹೋರಾಟಕ್ಕೆ ಫಲ ಸಿಗುವ ಮುನ್ಸೂಚನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: 78 ಲಕ್ಷ ಪಿಂಚಣಿದಾರರ ಪರ ನಿಂತಿರುವ ಇಪಿಎಸ್-95 ರಾಷ್ಟ್ರೀಯ ಆಂದೋಲನ ಸಮಿತಿ  (ಎನ್‌ಸಿ) ಹೋರಾಟಕ್ಕೆ ಫಲಸಿಗುವ ಎಲ್ಲ ಮುನ್ಸೂಚನೆಗಳು ಕಾಣಿಸುತ್ತಿವೆ.  ಹೀಗಾಗಿ ಅತೀ ಶೀಘ್ರದಲ್ಲೇ ಎಲ್ಲ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ ₹7,500 ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಕೈಗಾರಿಕೆ, ಸಾರ್ವಜನಿಕ ಸಹಕಾರ ಮತ್ತು ಖಾಸಗಿ ವಲಯದ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ ₹7,500 ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸ್ವತಃ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಇಪಿಎಸ್-95 ರಾಷ್ಟ್ರೀಯ ಆಂದೋಲನ ಸಮಿತಿ (ಎನ್‌ಸಿ) ಶುಕ್ರವಾರ ತಿಳಿಸಿದೆ.

ಇನ್ನು ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಜುಲೈ 31 ಮತ್ತು ಇದೇ ತಿಂಗಳ 1ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಸಮಿತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಮಿತಿಯ ಪ್ರತಿನಿಧಿಗಳು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ಸಮಿತಿ ತಿಳಿಸಿದೆ.

ಸದ್ಯ ಪಿಂಚಣಿದಾರರಿಗೆ ಮಾಸಿಕ ₹1,450 ಪಿಂಚಣಿ ದೊರೆಯುತ್ತಿದೆ. 36 ಲಕ್ಷ ಪಿಂಚಣಿದಾರರು ಕನಿಷ್ಠ ₹1 ಸಾವಿರಕ್ಕಿಂತಲೂ ಕಡಿಮೆ ಪಿಂಚಣಿ ಪಡೆಯುತ್ತಿದ್ದಾರೆ. ಹಾಗಾಗಿ, ಈ ಮೊತ್ತ ಹೆಚ್ಚಿಸಲು ಒತ್ತಾಯಿಸಲಾಗಿದೆ ಎಂದು ತಿಳಿಸಿದೆ.

ಪಿಂಚಣಿ ಹೆಚ್ಚಳದ ಜೊತೆಗೆ ಅದಕ್ಕೆ ಅನುಗುಣವಾಗಿ ತುಟ್ಟಿಭತ್ಯೆ ನೀಡಬೇಕು. ಪಿಂಚಣಿದಾರರು ಮತ್ತು ಅವರ ಪತ್ನಿಯರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಅಶೋಕ್ ರಾವುತ್ ತಿಳಿಸಿದ್ದಾರೆ.

ಇನ್ನು ಈ ಎಲ್ಲ ಭರವಸೆಗಳ ಬಗ್ಗೆ ಹಾಗೂ ಸಚಿವ ಜತೆ ನಡೆದ ಮಾತುಕತೆ ಏನಾಯಿತು ಎಂಬುದರ ಬಗ್ಗೆ ನಿವೃತ್ತರೊಂದಿಗೆ ಚರ್ಚಿಸುವ ಸಲುವಾಗಿ ನಾಳೆ ಅಂದರೆ ಆ.4ರಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸಭೆಕರೆಯಲಾಗಿದೆ. ಹೀಗಾಗಿ ಎಲ್ಲರೂ ತಪ್ಪದೆ ಸೇರಿ ಅಂದು ಚರ್ಚೆ ಮಾಡಲಿದ್ದೇವೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು