CrimeNEWSನಮ್ಮಜಿಲ್ಲೆ

ಮಾನವ ಕಳ್ಳ ಸಾಗಣಿಕೆ ನಿರ್ಮೂಲನೆಗೆ ಕೈಜೋಡಿಸಿ: ನ್ಯಾಯಾಧೀಶೆ ಕೃಪಾ ಕರೆ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಮಾನವ ಕಳ್ಳ ಸಾಗಣಿಕೆಯು ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ನಾಗರೀಕ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಲ್. ಕೃಪಾ ಕರೆ ನೀಡಿದರು.

ಅವರು ಕೆ.ಆರ್.ಪೇಟೆ ಪಟ್ಟಣದ ಎಸ್.ಎಂ.ಲಿಂಗಪ್ಪ ಸಹಕಾರ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ಜಾಗೃತಿ, ಸಾಮಾಜಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಹಾಗೂ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ, ಸಾಮಾಜಿಕ ಅನಿಷ್ಟ ಪದ್ಧತಿ ನಿಷೇಧ ಜಾಗೃತಿ ಕುರಿತು ಪ್ರಮಾಣ ವಚನ ಬೋಧಿಸಿ ಮಾತನಾಡಿದರು.

ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಜಾಲವು ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಭಾರತ ದೇಶವು ಮಾನವ ಕಳ್ಳ ಸಾಗಣಿಕೆಯ ಜಾಲದಲ್ಲಿ 3ನೇ ಸ್ಥಾನ ಪಡೆದಿದೆ. ಮಹಿಳೆಯರು ಹಾಗೂ ಮಕ್ಕಳು ಮೋಸ ಹಾಗೂ ಆಮಿಷಕ್ಕೆ ಸಿಲುಕಿ ಮಾನವ ಕಳ್ಳ ಸಾಗಣಿಕೆ ಜಾಲದ ಬಂಧಿಗಳಾಗಿ ದೌರ್ಜನ್ಯಕ್ಕೆ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮಾನವ ಕಳ್ಳ ಸಾಗಣಿಕೆ ಜಾಲದ ಬಗ್ಗೆ ಶ್ರೀಸಾಮಾನ್ಯರು ಸದಾ ಜಾಗೃತರಾಗಿರಬೇಕು ಎಂದರು.

ಇನ್ನು ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಂಘಟಿತರಾಗಿ ಹೋರಾಟ ನಡೆಸಲು ಸಜ್ಜಾಗಬೇಕು ಎಂದು ಮನವಿ ಮಾಡಿದ ನ್ಯಾಯಾಧಿಶರಾದ ಕೃಪಾ ತಾಯಿಯ ಎದೆಯ ಹಾಲು ಅಮೃತಕ್ಕೆ ಸಮಾನವಾದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಸ್ತನ್ಯಪಾನದ ಮೂಲಕ ಹಾಲುಣಿಸಿ ಮಕ್ಕಳ ಆರೋಗ್ಯ ಸಂವರ್ಧನೆಗೆ ಮುಂದಾಗಬೇಕು ಎಂದು ಹೇಳಿದರು.

ತಹಶೀಲ್ದಾರ್ ಆದರ್ಶ ಮಾತನಾಡಿ, ಮಾನವ ಕಳ್ಳ ಸಾಗಾಟದ ವಿಷ ವರ್ತುಲವನ್ನು ಕತ್ತರಿಸಿ ಆರೋಗ್ಯವಂತ ನಾಗರಿಕ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು. ಜನ ಜಾಗೃತಿಯಿಂದ ಮಾತ್ರ ಸಾಮಾಜಿಕ ಅನಿಷ್ಟ ಪದ್ಧತಿ ಸೇರಿದಂತೆ ಸಾಮಾಜಿಕ ಕಟ್ಟುಪಾಡುಗಳು ಹಾಗೂ ಮೌಢ್ಯವನ್ನು ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಮಾತನಾಡಿ ಗ್ರಾಮೀಣ ಪ್ರದೇಶದ ಜನರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಸಾಧನೆ ಮಾಡಲು ಅವಕಾಶ ಮಾಡಿಕೊಡಬೇಕು. ಜನ ಸಾಮಾನ್ಯರು ಜಾಗೃತರಾದಾಗ ಮಾತ್ರ ಮಾನವ ಕಳ್ಳ ಸಾಗಣಿಕೆ ಸೇರಿದಂತೆ ಸಾಮಾಜಿಕ ಅನಿಷ್ಠ ಪದ್ದತಿಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಬಹುದು ಎಂದು ರವಿಶಂಕರ್ ಅಭಿಪ್ರಾಯಪಟ್ಟರು.

ಸಹಾಯಕ ಸರ್ಕಾರಿ ಅಭಿಯೋಜಕ ಸುರೇಂದ್ರ, ವಕೀಲರ ಸಂಘದ ಕಾರ್ಯದರ್ಶಿ ರಾಜೇಗೌಡ, ಸರ್ಕಲ್ ಇನ್ಸ್ಪೆಕ್ಟರ್ ಆನಂದೇಗೌಡ, ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿ ಅರುಣಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸಿಡಿಪಿಒ ಪದ್ಮಾ ಸ್ವಾಗತಿಸಿದರೆ, ರೂಪ ವಂದಿಸಿದರು, ಶಿಕ್ಷಣ ಸಂಯೋಜಕ ಜ್ಞಾನೇಶ್ ಮತ್ತು ರಾಜಶ್ವನಿರೀಕ್ಷಕ ಜಗಧೀಶ್ ಕಾರ್ಯಕ್ರಮ ನಿರೂಪಿಸಿದರು.
ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...