NEWSಕೃಷಿನಮ್ಮಜಿಲ್ಲೆ

ಸಮಸ್ಯೆ ಬಗೆಹರಿಸುವ ತನಕ ಮಹದೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಬೇಡಿ: ರೈತ ಮುಖಂಡರು

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ರೈತರ ಬಾಕಿ ಟನ್‌ಗೆ 150 ರೂ. ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ ಹಂಚಿಕೆ, ಪ್ರಸಕ್ತ ಸಾಲಿನ ಹೆಚ್ಚುವರಿ ಕಬ್ಬಿನ ದರ ನಿಗದಿ ಮಾಡುವ ತನಕ ಬಣ್ಣಾರಿ, ಮಹದೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಬೇಡಿ ಬದಲಿಗೆ ಹೆಚ್ಚು ದರ ನೀಡುವ ಬೇರೆ ಜಿಲ್ಲೆಯ ಕಾರ್ಖಾನೆಗಳಿಗೆ ಸರಬರಾಜು ಮಾಡಿ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹೇಳಿದೆ.

ಈ ಸಂಬಂಧ ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಮುಂಖಡರು, ಬಣ್ಣಾರಿ, ಮಹದೇಶ್ವರ ಸಕ್ಕರೆ ಕಾರ್ಖಾನೆಗಳ ಮುಂದೆ ಸಾವಿರಾರು ರೈತರು ಸಮಾವೇಶ ನಡೆಸಿ, ಕಬ್ಬಿನ ಬಾಕಿ ಹಣ ಪಾವತಿಸಿ ಕಾರ್ಖಾನೆ ಆರಂಭಿಸಬೇಕು ಎಂದು ಎಚ್ಚರಿಕೆ ಸಂದೇಶ ನೀಡಿದ್ದರೂ ಗಂಭೀರವಾಗಿ ಪರಿಗಣಿಸದೆ ಕಾರ್ಖಾನೆ ಆರಂಭಿಸಲು ಮುಂದಾಗಿರುವುದು ರೈತ ದ್ರೋಹಿ ಕಾರ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕಳೆದ ಐದು ವರ್ಷಗಳ ಹಿಂದೆ ಇದೇ ಕಾರ್ಖಾನೆ ಸಕ್ಕರೆ ಇಳುವರಿ 10.50 ತೋರಿಸುತ್ತಿತ್ತು .ಈಗ 9ಕೆ ಇಳಿದಿದೆ ಇದರಿಂದ ರೈತರಿಗೆ ಟನ್‌ಗೆ 450 ರೂ. ಕಡಿಮೆ ಸಿಗುತ್ತಿದೆ. ಇದೆ ಕಾರ್ಖಾನೆಯಲ್ಲಿ ಬರುವ ಮೊಲಾಸಿಸ್ ಕಡಿಮೆ ಬೆಲೆಗೆ ಅಳಗಂಚಿಯ ಬಣ್ಣಾರಿ ಡಿಸ್ಟಿಲರಿಗೆ ಮಾರಾಟ ಮಾಡುತ್ತಿದ್ದೇವೆ ಎಂದು ಲೆಕ್ಕ ತೋರುತ್ತಿರುವುದರಿಂದ ಇದರಲ್ಲಿಯೂ ರೈತರಿಗೆ ಉಪ ಉತ್ಪನ್ನಗಳ ಲಾಭ ಇಲ್ಲದಂತೆ ಮೋಸವಾಗುತ್ತಿದೆ.

ಪರಿಣಾಮ ರೈತರಿಗೆ ಕಬ್ಬು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕಬ್ಬಿನ ದರ ಸಿಗುತ್ತಿದೆ. ಮಹದೇಶ್ವರ ಸಕ್ಕರೆ ಕಾರ್ಖಾನೆ ರಾಜ್ಯದಲ್ಲಿಯೇ ಅತಿ ಕಡಿಮೆ ದರ ನೀಡುತ್ತಿದೆ. ಈ ಕಾರ್ಖಾನೆ ಕಳೆದ ವರ್ಷ 6.40 ಲಕ್ಷ ಟನ್ ಕಬ್ಬು ನುರಿಸಿ ಸಕ್ಕರೆ ಇಳುವರಿ 9.10 ತೋರಿಸಿದೆ. ಈ ವರ್ಷ 5 ಲಕ್ಷ ಟನ್ ಕಬ್ಬು ಮಾತ್ರ ರೈತರು ಬೆಳೆದಿದ್ದು ಕಳೆದ ವರ್ಷ ಬರಗಾಲದ ಕಾರಣ ಶೇಕಡ 30ರಷ್ಟು ಕಬ್ಬು ಕಡಿಮೆಯಾಗಿದೆ. ಸಕ್ಕರೆ ಕಾರ್ಖಾನೆಗಳು ಈಗ ರೈತರಿಗೆ ಪ್ರೋತ್ಸಾಹಧನ ನೀಡಿ ಕಬ್ಬು ಬೆಳೆಯುವಂತೆ ಪ್ರೇರೇಪಿಸುವ ಸ್ಥಿತಿ ಬಂದಿದೆ.

ವಿದ್ಯುತ್ ಅವಘಡದಿಂದ ಸುಟ್ಟು ಹೋದ ಕಬ್ಬಿಗೆ ಕಾರ್ಖಾನೆಯವರು ಟನ್ ಕಬ್ಬಿನ ಹಣದಲ್ಲಿ 25% ಪರ್ಸೆಂಟ್ ಕಡಿತ ಮಾಡಿರುವುದನ್ನು ರೈತರಿಗೆ ವಾಪಸ್ ಕೊಡಿಸಬೇಕು. ಇವರ ಮಾಲೀಕತ್ವದ ತಮಿಳುನಾಡಿನಲ್ಲಿ ಸರ್ಕಾರ ನಿಗದಿ ಮಾಡಿರುವ ಎಫ್ ಆರ್ ಪಿ ಪೂರ್ತಿ ಹಣ ನೀಡುತ್ತಿದ್ದಾರೆ ಇಲ್ಲಿ ತಾರತಮ್ಯ ಏಕೆ.

ಈಗ ಕಬ್ಬು ಕಡಿಮೆ ಇರುವ ಕಾರಣ ಸಕ್ಕರೆ ಕಾರ್ಖಾನೆಗಳು ಪೈಪೋಟಿಯಿಂದ ಕಬ್ಬು ಖರೀದಿಸಲು ಮುಂದಾಗುತ್ತಿದ್ದಾರೆ ಈಗಾಗಲೇ ಬೇರೆ ಜಿಲ್ಲೆಯ ಕಾರ್ಖಾನೆಯವರು ಸಾಗಾಣಿಕೆ ವೆಚ್ಚ ನಾವೇ ಕೊಡುತ್ತೇವೆ ನಮಗೆ ಕೊಡಿ ಎಂದು ಹೇಳುತ್ತಿದ್ದಾರೆ. ಹೊಸದಾಗಿ ಕಬ್ಬು ಹಾಕುವ ರೈತರಿಗೆ ಎಕರೆಗೆ 8000 ಪ್ರೋತ್ಸಾಹ ಧನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮಹದೇಶ್ವರ ಕಾರ್ಖಾನೆಯವರು ಸಮಸ್ಯೆ ಬಗೆಹರಿಸುವ ತನಕ ಕಬ್ಬುಪೂರೈಕೆ ಮಾಡಬಾರದು ಎಂದು ಮನವಿ ಮಾಡಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ. ರೈತರ ಸಾಲ ಮನ್ನಾ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ರಾಜ್ಯಾದ್ಯಂತ ಆಗಸ್ಟ್ 15 ರಂದು ಜಿಲ್ಲಾದಿಕಾರಿ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಮುಂದೆ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಾಗುವುದು ಎಂದರು.

ಪತ್ರಿಕಾ ಗೋಷ್ಠಿಗೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ಜಿಲ್ಲೆಯ ಪದಾಧಿಕಾರಿಗಳ ಸಭೆ ನಡೆಸಿದರು. ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಉಡಿಗಾಲ ರೇವಣ್ಣ, ಪ್ರಧಾನ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಮುಂತಾದವರು ಇದ್ದರು.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ