Please assign a menu to the primary menu location under menu

NEWSಉದ್ಯೋಗನಮ್ಮರಾಜ್ಯ

ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನಕ್ಕಾಗಿ ಹೋರಾಟ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ನೀಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಒತ್ತಾಯಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪದ್ಮಾ ಮಂಗಲ ಕಾರ್ಯಾಲಯದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ತನ್ನ ನೌಕರರ ವೇತನ ಪರಿಷ್ಕರಿಸಲಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ವೇತನ ಒದಗಿಸಿಕೊಡುವ ನಿಟ್ಟಿನಲ್ಲಿ ನಮ್ಮ ಹೋರಾಟ ನಡೆಯಲಿದೆ ಎಂದು ‌ಹೇಳಿದರು.

ರಾಜ್ಯದಲ್ಲಿ ನೌಕರರ ವೇತನ ಪರಿಷ್ಕರಣೆಗಾಗಿ ಹಲವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾಗ ಯಾರೂ ಒಪ್ಪಲ್ಲಿಲ್ಲ. ಆದರೆ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿಗಳ ಒತ್ತಡದಲ್ಲಿಯೂ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿ ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಿ ನೌಕರರ ಹಿತ ಕಾಪಾಡಿದ್ದಾರೆ‌ ಎಂದರು.

ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂವರು ಐಎಎಸ್‌ ಅಧಿಕಾರಿಗಳ ನಿಯೋಗ ರಚಿಸಿ ಅಧ್ಯಯನದ ವರದಿ ಕೊಡುವಂತೆ ಸೂಚಿಸಿದ್ದಾರೆ. ನಿಯೋಗ ವರದಿ ಸಲ್ಲಿಸಿದ ಬಳಿಕ ರಾಜ್ಯದಲ್ಲಿ ಹಳೇ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು‌ ತಿಳಿಸಿದರು.

ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ಡಿವೈಎಸ್ಪಿ ಜಿ.ಬಿ.ಗೌಡರ, ಸಂಪಾದನಾ ಚರಮೂರ್ತಿಮಠದ ಶ್ರೀ ಸಂಪಾದನಾ ಸ್ವಾಮಿಗಳು ಮಾತನಾಡಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮತ್ತು ಬೆಳಗಾವಿ ತಾಲೂಕಿನ 600 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಜ್ಯ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಶ್ರೀನಿವಾಸ, ಡಾ. ಎಸ್‌. ಸಿದ್ಧರಾಮಣ್ಣ, ಎಂ.ವಿ. ರುದ್ರಪ್ಪ, ಡಿ.ಎನ್‌. ಕಾಂಬಳೆ, ಬಿ.ಎಚ್‌. ವೆಂಕಟೇಶಯ್ಯ, ರಾಜ್ಯ ಪರಿಷತ್‌ ಸದಸ್ಯ ನವೀನ ಗಂಗರೆಡ್ಡಿ, ಎಸ್‌.ಎನ್‌. ಬೆಳಗಾವಿ, ಡಿ.ಎಸ್‌. ವಂಟಗುಡೆ, ಉಮೇಶ ತೋಟದ, ಡಾ. ಅರುಣ ಸಂಗ್ರೊಳ್ಳೆ, ರಾಮಗೌಡ ಪಾಟೀಲ, ಎಂ.ಎ. ಬಿರಾದಾರ, ವೈ.ಎಸ್‌. ಪಾಟೀಲ, ಸೋಮನಾಥ ಪೂಜೇರಿ, ಚಂದ್ರಶೇಖರ ಅರಬಾವಿ, ಎಸ್‌.ಎ. ಖಡ್ಡ ಇದ್ದರು.

Leave a Reply

error: Content is protected !!
LATEST
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ