CrimeNEWSದೇಶ-ವಿದೇಶನಮ್ಮರಾಜ್ಯ

ಮೇಲಧಿಕಾರಿಗಳ ₹2ಲಕ್ಷ ಲಂಚ ದಾಹಕ್ಕೆ ನೊಂದು ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.

ಸಂತೋಷ್ (36) ಆತ್ಮಹತ್ಯೆಗೆ ಶರಣಾದ ಬ್ಯಾಂಕ್‌ ಅಧಿಕಾರಿ. ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಸಂತೋಷ್ ಅದರಲ್ಲಿ ಮೇಲಧಿಕಾರಿಗಳ ಕಿರುಕುಳ  ಹೆಚ್ಚಾಗಿದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಬರೆದಿದ್ದಾರೆ.

ಡೆತ್​​ ನೋಟ್​​ನಲ್ಲಿ ಮೇಲಧಿಕಾರಿಗಳ ಕಿರುಕುಳ ನೀಡಿದ್ದಾರೆ ಎಂದು ಬರೆದಿದ್ದು, ಸಂತೋಷ್ ಮಧ್ಯ ಪ್ರದೇಶದ ಖಾಸಗಿ  ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲಿನ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿಗೆ ವರ್ಗಾವಣೆ ಕೋರಿದ್ದರು. ಆದರೆ ಬ್ಯಾಂಕ್ ಅಧಿಕಾರಿಗಳು ವರ್ಗಾವಣೆಗೂ ಕೂಡಾ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗುತ್ತಿದೆ.

ಇನ್ನು ಅಧಿಕಾರಿಗಳ ಲಂಚಾವತಾರದಿಂದ ಮನನೊಂದು ಸಂತೋಷ್ ಖಾಸಗಿ ಲಾಡ್ಜ್ ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಸಂತೋಷ್ ಪತ್ನಿ ಲಾವಣ್ಯ ಅವರು ಈ ಸಂಬಂಧ ದೂರು ದಾಖಲಿಸಿದ್ದು, ಸ್ಥಳಕ್ಕೆ ಹೊಸದುರ್ಗ ಆರಕ್ಷಕ ವೃತ್ತ ನಿರೀಕ್ಷ (ಪೊಲೀಸ್‌ ಇನ್ಸ್‌ಪೆಕ್ಟರ್‌) ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ