NEWSಕೃಷಿನಮ್ಮಜಿಲ್ಲೆ

ಮಳೆಯಿಂದ ಹಾನಿ ಒಳಗಾಗುತ್ತಿದ್ದರೆ ಕೂಡಲೇ ಸಹಾಯವಾಣಿ ಸಂಪರ್ಕಿಸಿ: ಡಿಸಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಬಸವರಾಜು ತಿಳಿಸಿದ್ದಾರೆ.

ಇನ್ನು ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ, ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ (KSNDMC)ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು.

ಅದರಂತೆ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್‌ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ ಎಂದು ವಿವರಿಸಿದ್ದಾರೆ.

ಈ ಅಪ್ಲಿಕೇಶನ್‌ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ, ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್‌ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...