CrimeNEWSನಮ್ಮಜಿಲ್ಲೆ

ಮಂಡ್ಯ: ಹಳಿ ದಾಟುತ್ತಿದ್ದಾಗ ಗೋಲ್ಡ್ ಮೆಡಲ್ ಪದವೀಧರೆ ರಮ್ಯ ರೈಲಿಗೆ ಸಿಲುಕಿ ಮೃತ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಎಂಕಾಂನ ಗೋಲ್ಡ್ ಮೆಡಲ್ ಪದವೀಧರೆ  ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.

ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ (24) ದಾರುಣವಾಗಿ ಮೃತಪಟ್ಟ ಯುವತಿ. ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ ಹಳಿ ದಾಟುವ ವೇಳೆ ಹಂಪಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ರಮ್ಯ ಕೊನೆಯುಸಿರೆಳೆದಿದ್ದಾರೆ.

ಹಂಪಿ ಎಕ್ಸ್‌ಪ್ರೆಸ್‌ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ರೈಲಿಗೆ ಸಿಲುಕಿದ ಯುವತಿಯ ದೇಹ ಛಿದ್ರಛಿದ್ರಗೊಂಡಿದೆ.

ರಮ್ಯಾ ಎಂಕಾಂನಲ್ಲಿ ಚಿನ್ನದ ಪದಕ ಪಡೆದಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಅವರು, ನಿನ್ನೆ ಮಂಡ್ಯಕ್ಕೆ ಬೆಂಗಳೂರಿನಿಂದ ಬಂದಿದ್ದವೇಳೆ ಹಂಪಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಂಡ್ಯ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

1 Comment

  • Brother..KSRTC 4 Corporation galalliro 1 lakh 20 thousand employees elru demand onede salary jasti aghbeku annode main demand . Ee chowkasi agriment madi sarkarada kade inda ivarige en labha ide gottilla sarkarada kade inda ivarige estu duddu yava lekkadalli yava fund inda yara kaige kodtharo gottilla hagagie Ella sangatanegalu oggattagi orata madi 7th pay commission prakara salary kodsi Ella employees one dinada salary sanghatanege kodtheve please idan a HIKE madi news madi please…..

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ