NEWSನಮ್ಮರಾಜ್ಯ

ನಮ್ಮ 5 ಗ್ಯಾರಂಟಿಗಳ ಯಾವುದೆ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿಶೇಷ ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿದರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿ, ನಾವು ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಈ ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಹಲವು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಗಳು ನಡೆಯುತ್ತಿದ್ದು, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಬ್ರಿಟಿಷರ ನಡುವಿನ ಯುದ್ಧ ಸನ್ನಿವೇಶ ಮತ್ತು ರಾಣಿ ಅಬ್ಬಕ್ಕನ ಹೋರಾಟದ ಮೆಲುಕಿನ ಜತೆಗೆ ಮಲ್ಲಗಂಬ ಕಸರತ್ತು ಪ್ರದರ್ಶನ ಸೇರಿದಂತೆ ಹಲವು ರೀತಿಯ ಭಾರತೀಯ ಸಂಸ್ಕೃತಿಯನ್ನು ಅನಾವರಣ ಮಾಡುವ ಕಾರ್ಯಕ್ರಮಗಳು ನಡೆಯುತ್ತಿವೆ.

ಕವಾಯತು ನಡೆಯುವ ಮೈದಾನದ ಸುತ್ತಮುತ್ತ ಪೊಲೀಸರು ವಿಶೇಷ ಭದ್ರತೆ ವಹಿಸಿದ್ದಾರೆ. ಬೆಳಗ್ಗೆಯಿಂದಲೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಮೈದಾನದ ಇಂಚಿಂಚೂ ಸಹ ತಪಾಸಣೆ ನಡೆಸಿತು.

ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದಂತೆ 10 ಡಿಸಿಪಿ, 17 ಎಸಿಪಿ, 42 ಇನ್ಸ್‌ಪೆಕ್ಟರ್, 112 ಸಬ್ ಇನ್ಸ್‌ಪೆಕ್ಟರ್, 62 ಸಹಾಯಕ ಸಬ್ ಇನ್ಸ್‌ಪೆಕ್ಟರ್, 511 ಕಾನ್ಸ್‌ಟೇಬಲ್, 72 ಮಹಿಳಾ ಸಿಬ್ಬಂದಿ, 129 ಸಾದಾ ಉಡುಪಿನ ಅಧಿಕಾರಿಗಳು ಮತ್ತು ಸಿಬ್ಬಂದಿ, 27 ಜನ ಕ್ಯಾಮರಾ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಂಚಾರ ವ್ಯವಸ್ಥೆ ನಿರ್ವಹಣೆಗಾಗಿ 3 ಜನ ಡಿಸಿಪಿ, 6 ಎಸಿಪಿ, 19 ಇನ್ಸ್‌ಪೆಕ್ಟರ್, 32 ಸಬ್ ಇನ್ಸ್‌ಪೆಕ್ಟರ್, 111 ಸಹಾಯಕ ಸಬ್ ಇನ್ಸ್‌ಪೆಕ್ಟರ್, 430 ಕಾನ್ಸ್‌ಟೇಬಲ್ ಸೇರಿದಂತೆ ಒಟ್ಟು 1583 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್