CRIMENEWSನಮ್ಮಜಿಲ್ಲೆ

KSRTC: ಮಳೆಗೆ ನೆಲಕ್ಕುರಳಿದ ವಿದ್ಯುತ್ ಕಂಬ ಲೈನ್‌ ಗಮನಿಸದೆ ಬೈಕ್‌ ಚಲಾಯಿಸಿ ಸಾರಿಗೆ ಸಂಚಾರಿ ನಿಯಂತ್ರಕ ಮೃತ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಸಂಚಾರಿ ನಿಯಂತ್ರಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯ ನಿವಾಸಿ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಕೊನೆಯುಸಿರೆಳೆದ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದ ಸಂಚಾರಿ ನಿಯಂತ್ರಕ. ಇಂದು ಮುಂಜಾನೆ ಈ ಘಟನೆ ನಡೆದಿದೆ.

ಕಳೆದ ರಾತ್ರಿ ಅಂದರೆ ಶುಕ್ರವಾರ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಈ ವೇಳೆ ತಂತಿಗಳು ಕೂಡ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದವು. ಆದರೆ ಅವುಗಳನ್ನು ಗಮನಿಸದೆ ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುತ್ತಿದ್ದಾಗ ಬೈಕ್‌ಗೆ ತಂತಿ ಟಚ್‌ಆಗಿದೆ ಇದರಿಂದ ರೆಡ್ಡಪ್ಪ ಅವರಿಗೂ ವಿದ್ಯುತ್‌ ಹರಿದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಮಾಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ