NEWSಕೃಷಿನಮ್ಮರಾಜ್ಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೂರಾರು ರೈತರ ಟ್ರ್ಯಾಕ್ಟರ್‌ಗಳ ರ‍್ಯಾಲಿ- ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಂಸ್ಕೃತಿಕನಗರಿ ಮೈಸೂರಿನ ಪ್ರಮುಖ ಬೀದಿಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಗನ್‌ಹೌಸ್ ವೃತ್ತದಿಂದ ನೂರಾರು ರೈತರು ಟ್ರ್ಯಾಕ್ಟರ್‌ಗಳ ರ‍್ಯಾಲಿ ಹಮ್ಮಿಕೊಂಡಿದ್ದರು.

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಗುರುವಾರ ಟ್ರ್ಯಾಕ್ಟರ್‌ ರ‍್ಯಾಲಿ ಆರಂಭಿಸಿದ ರೈತರು, ಡಿ. ದೇವರಾಜ ಅರಸು ರಸ್ತೆ, ಚಾಮರಾಜ ಜೋಡಿ ರಸ್ತೆ, ಹಾರ್ಡಿಂಜ್ ವೃತ್ತ, ನಜರ್‌ಬಾದ್ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.

ಜಿಲ್ಲಾಧಿಕಾರಿ ಕಚೇರಿಯೊಳಗೆ ಟ್ರ್ಯಾಕ್ಟರ್‌ಒಳ ಹೋಗಲು ಯತ್ನಿಸಿದಾಗ ಪೊಲೀಸರು ತಡೆದರು. ನಂತರ ಟ್ಯಾಕ್ಟರ್‌ಗಳನ್ನು ಹೊರಗೆ ನಿಲ್ಲಿಸಿದ ರೈತರು, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್ ಅವರಿಗೆ ಹಕ್ಕೋತ್ತಾಯ ಪತ್ರ ಸಲ್ಲಿಸಿ, ಪ್ರಧಾನ ಮಂತ್ರಿಗೆ ರವಾನಿಸುವಂತೆ ಕೋರಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ಮಾತನಾಡಿ, ಸ್ವಾತಂತ್ರ್ಯ ಬಂದು 78 * ವರ್ಷವಾದರೂ ರೈತರಿಗೆ ಸ್ವಾತಂತ್ರ್ಯದ ನೆರವು ಸಿಕ್ಕಿಲ್ಲ. ರೈತರ ಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ. ಅಧಿಕಾರಕ್ಕೆ ಬಂದ ಎಲ್ಲ ಪಕ್ಷಗಳ ಅಧಿಕಾರಸ್ಥರು ರೈತರ ವೋಟಿಗಾಗಿ ಸುಳ್ಳು ಭರವಸೆಗಳನ್ನು ನೀಡಿ ಮೋಸಗೊಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ನಮ್ಮ ವಿರೋಧವಿಲ್ಲ. ಆದರೆ, ಅಧಿಕಾರದಲ್ಲಿ ನಮ್ಮನ್ನು ಮರೆತಿರುವ ಸರ್ಕಾರದ ಗಮನ ಸೆಳೆಯಲು ಈ ರ‍್ಯಾಲಿ ಹಮ್ಮಿಕೊಂಡಿದ್ದಾಗಿ ಹೇಳಿದರು.

ಸ್ವಾತಂತ್ರ್ಯ ಬಂದಾಗ 60 ಲಕ್ಷ ಮಿಲಿಯನ್ ಟನ್ ಆಹಾರ ಉತ್ಪಾದನೆಯಾಗುತ್ತಿತ್ತು. ಆದರೆ ಇಂದು ರೈತರ ಶ್ರಮದಿಂದ 365 ಲಕ್ಷ ಮಿಲಿಯನ್ ಟನ್ ಆಹಾರ ಉತ್ಪಾದನೆ ಮಾಡುತ್ತಿದ್ದೇವೆ. ಆದರೆ, ರೈತರಿಗೆ ನ್ಯಾಯ ಸಿಗುತ್ತಿಲ್ಲ. ರೈತರು ಆತ್ಮಹತ್ಯೆ ಇಳಿದಿರುವುದು ದೇಶದ ದುರ್ದೈವ. ರೈತರು ಜಾಗೃತರಾಗಿ ಪಕ್ಷತೀತವಾಗಿ ಹೋರಾಟ ಮಾಡಲು ಮುಂದೆ ಬರಬೇಕು. ಆಗ ಸರ್ಕಾರಗಳು ರೈತರ ಪರ ನಿರ್ಧಾರ ಕೈಗೊಳ್ಳುತ್ತವೆ ಎಂದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು. ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ವಿಮೆ ನೀತಿ ಬದಲಾಯಿಸಿ ಪ್ರತಿ ರೈತನ ಹೊಲದ ಬೆಳೆ ವಿಮೆ ಜಾರಿ ತರುವಂತಾಗಬೇಕು. ಬರಗಾಲ ಅತಿವೃಷ್ಟಿ ಮಳೆ ಹಾನಿ, ಪ್ರವಾಹ ಹಾನಿ, ಪ್ರಾಕೃತಿ ವಿಕೋಪದ ಹಾನಿ, ಬೆಳೆ ನಷ್ಟ ಪರಿಹಾರದ ಎನ್‌ಡಿಆರ್‌ಎಫ್ ಮಾನದಂಡ ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪಿ. ಸೋಮಶೇಖರ್, ಕಿರಗಸೂರು ಶಂಕರ, ಕಮಲಮ್ಮ, ದೇವನೂರು ವಿಜಯೇಂದ್ರ, ಅಂಬಳೆ ಮಂಜುನಾಥ್, ಕುರುಬೂರು ಸಿದ್ದೇಶ್, ಪ್ರದೀಪ್, ಬಸವಣ್ಣ, ನಾಗೇಶ್, ಚುಂಚುರಾಯನ ಹುಂಡಿ ನಂಜುಂಡಸ್ವಾಮಿ, ಸೋಮಶೇಖರ್, ಕಿರಗಸೂರು ಪ್ರಸಾದ್ ನಾಯಕ್, ಸಿದ್ದರಾಮ, ಮಾರ್ಬಳ್ಳಿ ಬಸವರಾಜು, ಕೆಲ್ಲಹಳ್ಳಿ ಸೀನಪ್ಪ, ಸಾಕಮ್ಮ, ದೊಡ್ಡ ಕಾಟೂರು ಮಹದೇವಸ್ವಾಮಿ, ಶ್ರೀಕಂಠ, ಪರಶಿವಮೂರ್ತಿ, ನಿಂಗರಾಜು, ಸಾತಗಳ್ಳಿ ಬಸವರಾಜು, ಬನ್ನೂರು ಸೂರಿ, ಕೊಪ್ಪಲು ಕುಮಾರ್, ವಾಜಮಂಗಲ ಮಹದೇವು, ಮಾಲಿಂಗ ನಾಯಕ, ಆದಿಬೆಟ್ಟಳ್ಳಿ ನಂಜುಂಡಸ್ವಾಮಿ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...