NEWSದೇಶ-ವಿದೇಶನಮ್ಮರಾಜ್ಯ

ನಾರಿಯರಿಗೆ ಸಿಹಿಸುದ್ದಿಕೊಟ್ಟ ಸರ್ಕಾರ: ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ‌ 

ವಿಜಯಪಥ ಸಮಗ್ರ ಸುದ್ದಿ

ಭುವನೇಶ್ವರ: ಮಹಿಳೆಯರಿಗೆ ವೇತನ ಸಹಿತ (ಪಿಎಂಎಲ್) ಮುಟ್ಟಿನ ರಜೆ‌ ಘೋಷಿಸಿ ಮಹಿಳೆರಿಗೆ ಒಡಿಶಾ ಸರ್ಕಾರವು 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಿಹಿ ಸುದ್ದಿ ನೀಡಿದೆ.

ಈ ರಜೆಯನ್ನು ಮುಟ್ಟಿನ ಮೊದಲ ಅಥವಾ ಎರಡನೇ ದಿನದಂದು ತೆಗೆದುಕೊಳ್ಳಬಹುದು. ಈ ರಜೆಯು ಸಂಪೂರ್ಣ ಐಚ್ಛಿಕವಾಗಿರಲಿದೆ. ಮಹಿಳೆಯರು ರಜೆಯನ್ನು ತೆಗೆದುಕೊಳ್ಳದೆಯೂ ಇರಬಹುದು ಎಂದು ಕಟಕ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಪ್ರವತಿ ಪರಿದಾ ಹೇಳಿದರು.

ಪ್ರವತಿ ಅವರು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯೂ ಆಗಿದ್ದು, ಇವರ ಈ ನಿರ್ಧಾರದಿಂದ ಮಹಿಳೆಯರು ಖುಷಿ ವ್ಯಕ್ತಪಡಿಸಿದ್ದಾರೆ.

ಕೀನ್ಯಾದಲ್ಲಿ ವಿಶ್ವ ಸಂಸ್ಥೆಯ ಸಿವಿಲ್ ಸೊಸೈಟಿ ಕಾನ್ಸರೆನ್ಸ್ 2024ರಲ್ಲಿ ಭಾಗವಹಿಸಿದ್ದ ಒಡಿಶಾದ ಬಾಲಕಿಯೊಬ್ಬಳು, ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂಬ ವಿಷಯದ ಕುರಿತು ಮಾತನಾಡಿದ್ದಳು.

ಅಲ್ಲದೆ ಮಹಿಳಾ ಪರ ಹೋರಾಟಗಾರ್ತಿ ರಂಜಿತಾ ಪ್ರಿಯದರ್ಶಿನಿ ಅವರು ಕೂಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದರು. ಇದಕ್ಕೆ ಒಡಿಶಾ ಸರ್ಕಾರ ಸ್ಪಂದಿಸಿರುವುದು ಶ್ಲಾಘನೀಯ ವಾಗಿದೆ ಎಂದು ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್