Please assign a menu to the primary menu location under menu

NEWSಆರೋಗ್ಯನಮ್ಮರಾಜ್ಯ

ವೈದ್ಯೆಯ ಹತ್ಯೆ ಖಂಡಿಸಿ ಪ್ರತಿಭಟನೆ: ಇಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಬಂದ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋಲ್ಕತ್ತ ವೈದ್ಯೆಯ ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಇಂದು ಬಂದ್ ಆಗಲಿವೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ.

ಕೋಲ್ಕತ್ತದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಮಾಡಿರುವುದನ್ನು ಖಂಡಿಸಿ ಇಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಶನ್‌ಗಳು ಬೆಂಬಲ ಕೊಟ್ಟಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೂ ಓಪಿಡಿ ಬಂದ್ ಆಗಲಿದೆ. ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತ ಆಗಲಿದೆ.

ಓಪಿಡಿ ಸೇವೆ ಬಂದ್ ಆಗುವ ಕಾರಣ ರೋಗಿಗಳು ಆಸ್ಪತ್ರೆಗೆ ಹೋದರೆ ಚಿಕಿತ್ಸೆ ಸಿಗುವುದಿಲ್ಲ. ತುರ್ತು ಸೇವೆ ಮಾತ್ರ ಲಭ್ಯವಿರಲಿದೆ. ಬೆಂಗಳೂರಿನಲ್ಲಿ ಇರುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಪ್ರತಿಭಟನೆ ಕಾವು ಜೋರಾಗಿ ಇರಲಿದೆ.

ಇಂದಿನ ವೈದ್ಯರ ಪ್ರತಿಭಟನೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಪ್ರತಿಭಟನೆ ಉದ್ದೇಶ ಸರಿ ಇದೆ. ಅವರ ಹಕ್ಕನ್ನು ಅವರು ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದಿದ್ದಾರೆ. ಜತೆಗೆ ಪ್ರತಿಭಟನೆ ಇರುವ ಹಿನ್ನೆಲೆ ಇಂದು ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಸರ್ಕಾರ ಕೂಡ ಆದೇಶ ಮಾಡಿದೆ.

ಪ್ರತಿಭಟನೆಗೆ ಯರ‍್ಯಾರ ಬೆಂಬಲ?: ರಾಜ್ಯಾದ್ಯಂತ ಐಎಂಎ ವ್ಯಾಪ್ತಿಯಲ್ಲಿ 30,000 ವೈದ್ಯರಿದ್ದು, ಪ್ರತಿಭಟನೆಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ಒಕ್ಕೂಟ, ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಷಶನ್, ಮಕ್ಕಳ ವೈದ್ಯರ ಅಸೋಸಿಯೇಶನ್, ಅರ್ಥೋಪಿಡಿಕ್ ಅಸೋಸಿಯೇಶನ್, ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಶನ್, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.

Leave a Reply

error: Content is protected !!
LATEST
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ