CrimeNEWSನಮ್ಮಜಿಲ್ಲೆ

NWKRTC ಬಸ್‌- ಕಾರು ನಡುವೆ ಭೀಕರ ಅಪಘಾತ- ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವು

ವಿಜಯಪಥ ಸಮಗ್ರ ಸುದ್ದಿ

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತರು.

ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ NWKRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಬಸ್‌ನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ನರಗುಂದ ಪೊಲೀಸರು ಪರಿಶೀಲನೆ ನಡೆಸಿ ಬಸ್‌ನಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಘಟನೆ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು