NEWS

ತಿ.ನರಸೀಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ನಾಳೆ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಸೋಮವಾರ (ಆ.19) ತಿ.ನರಸೀಪುರ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಬಸವರಾಜು ತಿಳಿಸಿದ್ದಾರೆ.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಶನಿವಾಸ ಸಾಯಂಕಾಲ ತುರ್ತು ಸಭೆ ನೆಡಸಿದರು ಈ ವೇಳೆ ಮಾತನಾಡಿದ ಬಸವರಾಜು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಷಡ್ಯಂತ್ರವಾಗಿದ್ದು ನಾವೇಲ್ಲರು ಒಗ್ಗಟ್ಟಾಗಿ ರಾಜ್ಯಪಾಲರ ಆದೇಶವನ್ನು ಖಂಡಿಸುವ ಮೂಲಕ ಅಹಿಂದ ನಾಯಕ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಬೇಕು ಎಂದರು.

ತಾ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ರಮೇಶ್ ಮಾತನಾಡಿ, ಬಿಜೆಪಿ ಜೆಡಿಎಸ್ ಸಂವಿಧಾನ ಪೀಠದ ದುರುಪಯೋಗ ಮಾಡಿಕೊಂಡಿಕೊಂಡು ಸೇಡಿನ ರಾಜಕಾರಣ ಮಾಡುತ್ತಿದೆ. ಇದು ದ್ವೇಷದ ರಾಜಕಾರಣ ಅನ್ನೋದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.

ತಾ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕುಕ್ಕೂರು ಗಣೇಶ್ ಮಾತನಾಡಿ, ಹಿಂದುಳಿದ ನಾಯಕರಿಗೆ ತೊಂದರೆ ಮಾಡಲು ಈ ಪ್ರಯತ್ನ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯುವ ಹುನ್ನಾರ ಇದಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಲುಕಿಸುವ ಪ್ರಯತ್ನ ಇದು. ಇದಕ್ಕೆ ನಾವು ಅವಕಾಶ ಕೂಡಬಾರದು ಎಲ್ಲರೂ ಒಗ್ಗಟ್ಟಿನಿಂದ ರಾಜ್ಯಪಾಲರ ಆದೇಶದ ವಿರುದ್ಧ ಪ್ರತಿಭಟನೆ ಮಾಡೋಣ ಎಂದರು.

ಪುರಸಭಾ ಸದಸ್ಯ ಟಿ. ಎಂ.ನಂಜುಡಸ್ವಾಮಿ ಮಾತನಾಡಿ, ರಾಜ್ಯಪಾಲರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಅವರ ಮೇಲೆ ಕೇಂದ್ರ ಸರ್ಕಾರದ ಒತ್ತಡವಿದೆ ರಾಜಭವನ ಈಗ ಬಿಜೆಪಿ ಭವನವಾಗಿದೆ ಕೂಡಲೇ ರಾಜ್ಯಪಾಲರು ತಮ್ಮ ಆದೇಶವನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಸಭೆಯ ನಂತರ ಕಾಂಗ್ರೆಸ್ ಮುಖಂಡರು ವಿದ್ಯೋದಯ ಶಿಕ್ಷಣ ಸಂಸ್ಥೆ ಸರ್ಕಲ್‌ನಿಂದ ಖಾಸಗಿ ಬಸ್ ನಿಲ್ದಾಣದ ವರಗೆ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದರು. ಖಾಸಗಿ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೆಗೌಡ, ತಾ. ಪಂ.ಮಾಜಿ ಅಧ್ಯಕ್ಷರುಗಳಾದ ಹ್ಯಾಕನೂರು ಉಮೇಶ್, ಮಲ್ಲಿಕಾರ್ಜುನ ಸ್ವಾಮಿ, ತಾ.ಪಂ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರುಗಳಾದ ಕುಕ್ಕೂರು ಗಣೇಶ್, ಎಂ. ರಮೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ.

ಪುರಸಭಾ ಸದಸ್ಯರಾದ ಟಿ.ಎಂ. ನಂಜುಂಡಸ್ವಾಮಿ, ಸೋಮಣ್ಣ, ಮಂಜು ಬಾದಾಮಿ, ತುಂಬಲ ಪ್ರಕಾಶ್, ಎಸ್. ಮದನ್ ರಾಜು, ಎಸ್ಸಿ ಎಸ್ಟಿ ಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷ ಹೊಸಪುರ ಕೆ.ಮಲ್ಲು, ಮಾಜಿ ಜಿ. ಪಂ. ಸದಸ್ಯ ಮಹದೇವ್, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕರಾದ ಅಮ್ಜದ್ ಖಾನ್, ಲತಾ ಜಗದೀಶ್, ಕುರುಬರ ಸಂಘದ ಅಧ್ಯಕ್ಷ ಮನ್ನಹುಂಡಿ ಮಹೇಶ್, ಪ್ರಧಾನ ಕಾರ್ಯದರ್ಶಿ ಬಸವರಾಜು.

ಗ್ರಾಂ.ಪಂ. ಅಧ್ಯಕ್ಷ ಚಂದ್ರಮ್ಮ,ಮಾಜಿ ಅಧ್ಯಕ್ಷ ಕುಪ್ಯ ಭಾಗ್ಯಮ್ಮ, ಟೌನ್ ಕಾಂಗ್ರೆಸ್ ಅಧ್ಯಕ್ಷ ಅಂದಾನಿ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷರುಗಳಾದ ಮಹೇಶ್, ಅನಿಲ್ ಕುಮಾರ್, ಕನ್ನಹಳ್ಳಿ ಲಕ್ಷ್ಮಣ, ಕಲಿಯೂರು ಶಿವಣ್ಣ, ವರುಣ ಯುವ ಕಾಂಗ್ರೆಸ್ ಅಧ್ಯಕ್ಷ ಅಮಾವಾಸೆ ಲಿಂಗರಾಜು, ಉಪಾಧ್ಯಕ್ಷ ನಟರಾಜು.

ಮುಖಂಡರಾದ ಮಂಟಲಿಂಗಪ್ಪ, ಮಾದು, ಮಾದೇಶ್, ಮರಯ್ಯ, ಅಕ್ಕೂರು ಗುರುಮೂರ್ತಿ, ವೆಂಕಟೇಶ್, ಕಾಂತರಾಜು, ಅರುಣ್ ಗೌಡ, ಸಹದೇವ, ಗುರುಸ್ವಾಮಿ, ಲಿಂಗರಾಜು, ಅಬ್ದುಲ್ ಹತಿಕ್, ಮಸೂರ್ ಅಹಮದ್, ತಿರುಮಕೂಡಲು ಚೇತನ್, ಗಾಂಧಿ ಕೃಷ್ಣ, ನಾಗರಾಜಮೂರ್ತಿ,ಮಂಜು, ಹ್ಯಾಕನೂರು ಹರೀಶ್, ಗಣೇಶ್, ಉಮೇಶ್, ಮಿಥುನ್, ಎಡದೊರೆ ಮರಯ್ಯ ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್