NEWSನಮ್ಮಜಿಲ್ಲೆ

ನನೆಗುದಿಗೆ ಬಿದ್ದಿರುವ ಉಪ್ಪಾರ ಸಮುದಾಯ ಭವನ ಮತ್ತೆ ನಿರ್ಮಾಣಕ್ಕೆ ಸಚಿವ ಮಹದೇವಪ್ಪ ಭರವಸೆ: ಸಿದ್ದಶೆಟ್ಟಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಪಟ್ಟಣದ ನಂಜನಗೂಡು ಮುಖ್ಯರಸ್ತೆಯ ಹೆಳವರಹುಂಡಿ ಸಮೀಪ ನನೆಗುದಿಗೆ ಬಿದ್ದಿರುವ ಉಪ್ಪಾರ ಸಮುದಾಯ ಭವನ ಮತ್ತೆ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೆ ಬೇಕಾಗುವ ಅನುದಾನವನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು ತಾಲೂಕು ಭಗೀರಥ ಉಪ್ಪಾರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಕೇತಹಳ್ಳಿ ಸಿದ್ದಶೆಟ್ಟಿ ತಿಳಿಸಿದ್ದಾರೆ.

ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಮಾತನಾಡಿದ ಕೇತಹಳ್ಳಿ ಸಿದ್ದಶೆಟ್ಟಿ, ಉಪ್ಪಾರ ಸಮುದಾಯ ಭವನಕ್ಕೆ 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು.

ತದ ನಂತರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪ ಯೋಗಿ ಸಚಿವರಾಗಿದ್ದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಪುಟ್ಟರಂಗ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದ್ದರು.

ಆದರೆ, ನಂತರ ಬಂದ ಬಿಜೆಪಿ ಸರ್ಕಾರ ಆ ಹಣವನ್ನು ಹಿಂದಕ್ಕೆ ಪಡೆದ ಕಾರಣ ಕಾಮಗಾರಿ ನನೆಗುದ್ದಿಗೆ ಬಿದ್ದಿತು. ಸದ್ಯ ಮತ್ತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿದ್ದು ಸಚಿವ ಮಹದೇವಪ್ಪ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಕೂಡಿಸುತ್ತೇನೆ ನನ್ನ ಅವಧಿಯಲ್ಲೇ ಭವನವನ್ನು ಉದ್ಘಾಟನೆ ಸಹ ಮಾಡಿಕೂಡುತ್ತೇನೆ ಎಂದಿದ್ದಾರೆ. ಹೀಗಾಗಿ ಗಾಳಿ ಸುದ್ದಿಗೆ ಕಿವಿಗೂಡಬಾರದು ಎಂದು ಸಮುದಾಯದ ಜನರಿಗೆ ಸಿದ್ದಶೆಟ್ಟಿ ಮನವಿ ಮಾಡಿದರು.

ಮುಂದುವರಿದು ಮಾತನಾಡಿದ ಸಿದ್ದಶೆಟ್ಟಿ ಈಗಾಗಲೇ ನಮ್ಮ ಸಮುದಾಯದ ಮುಖಂಡರ ಜತೆ ಸಚಿವ ಮಹದೇವಪ್ಪ ಅವರನ್ನು ಭೇಟಿ ಮಾಡಿ ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದೇವೆ ಸದ್ಯದಲ್ಲೆ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್