NEWSನಮ್ಮರಾಜ್ಯ

NWKRTC: ಮೂವರು ಉಗ್ರಾಣ ಅಧೀಕ್ಷಕರಿಗೆ ಸಹಾಯಕ ಉಗ್ರಾಣಾಧಿಕಾರಿಯಾಗಿ ಪದೋನ್ನತಿ ನೀಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಗ್ರಾಣ ಅಧೀಕ್ಷಕ (ದರ್ಜೆ-3)ರಾಗಿ ಕರ್ತವ್ಯ ನಿರ್ವಹಿಸುತ್ತಿರುವ 3 ಮಂದಿಯನ್ನು ಸಹಾಯಕ ಉಗ್ರಾಣಾಧಿಕಾರಿಗಳ (ದರ್ಜೆ-2) ಹುದ್ದೆಗೆ ಬಡ್ತಿ ನೀಡಿ ಸಂಸ್ಥೆಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇದೇ ಜೂನ್24ರಂದು ನಡೆದ ಇಲಾಖಾ ಮುಂಬಡ್ತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಅದರಂತೆ ಸೂಕ್ತಾಧಿಕಾರಿಗಳ ಆದೇಶ ಮೇರೆಗೆ ಜೂನ್25ರಂದು ಉಗ್ರಾಣ ಅಧೀಕ್ಷಕ (ದರ್ಜೆ-3)ರಾಗಿ ಕರ್ತವ್ಯ ನಿರ್ವಹಿಸುತ್ತಿರುವ 3 ಮಂದಿಯನ್ನು ಸಹಾಯಕ ಉಗ್ರಾಣಾಧಿಕಾರಿಗಳ (ದರ್ಜೆ-2) ಹುದ್ದೆಗೆ ಬಡ್ತಿ ಎಂದು ತಿಳಿಸಿದ್ದಾರೆ.

ಬಡ್ತಿಯೊಂದಿಗೆ ವರ್ಗಾವಣೆಗೊಂಡವರ ವಿವರ: ಹುಬ್ಬಳ್ಳಿ ಕೇಂದ್ರ ಕಚೇರಿಯಲ್ಲಿ ಉಗ್ರಾಣ ಅಧೀಕ್ಷಕರಾಗಿದ್ದ ಗದಿಗೆಪ್ಪ ರು ಕವಳಿ ಅವರನ್ನು ಕೇಂದ್ರ ಕಚೇರಿಯಲ್ಲೇ ಸಹಾಯಕ ಉಗ್ರಾಣಾಧಿಕಾರಿಯಾಗಿ ಮುಂಬಡ್ತಿಯೊಂದಿಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಚಿಕ್ಕೋಡಿ ವಿಭಾಗದಲ್ಲಿ ಉಗ್ರಾಣ ಅಧೀಕ್ಷಕರಾಗಿದ್ದ ಶಿವಲಿಂಗಮ್ಮ ನೀಲಪ್ಪನವರ ಅವರನ್ನು ಚಿಕ್ಕೋಡಿ ವಿಭಾಗದಲ್ಲೇ ಸಹಾಯಕ ಉಗ್ರಾಣಾಧಿಕಾರಿಯಾಗಿ ಮತ್ತು ಉತ್ತರ ಕನ್ನಡ ವಿಭಾಗದಲ್ಲಿ ಉಗ್ರಾಣ ಅಧೀಕ್ಷಕರಾಗಿದ್ದ ರವೀಂದ್ರ ಭಟ್ ಅವರನ್ನು ಸಹಾಯಕ ಉಗ್ರಾಣಾಧಿಕಾರಿಯಾಗಿ ಬಡ್ತಿನೀಡಿ ಹುಬ್ಬಳ್ಳಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಎಲ್ಲ ಸಿಬ್ಬಂದಿಯವರ ಕಾರ್ಯ ಕ್ಷೇತ್ರದಲ್ಲಿ ಬದಲಾವಣೆ ಇರುವ ಸಿಬ್ಬಂದಿಗಳು ಮಾತ್ರ ನಿಯಮಾನುಸಾರ ನಿಯೋಜನಾ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಮುಂದುವರಿದಂತೆ, ಈ ಬಡ್ತಿಯು ವರಿಷ್ಠತಾ ಪಟ್ಟಿಯ ಪರಿಷ್ಕರಣೆಯಿಂದ ಹಾಗೂ ಜೇಷ್ಠತೆಯಲ್ಲಿ ಹಿರಿಯರಿರುವ ಯಾರಾದರೂ ಪೂರ್ವಾನ್ವಯ ಬಡ್ತಿಗೆ ಅರ್ಹತೆ ಪಡೆದುಕೊಂಡಲ್ಲಿ, ಜೇಷ್ಠತಾ ಪಟ್ಟಿಯಲ್ಲಿ ಕಿರಿಯರಿರುವ ಅಧಿಕಾರಿಗಳನ್ನು ಹಿಂಬಡ್ತಿಗೊಳಿಸುವ ಷರತ್ತಿಗೊಳಪಟ್ಟಿದೆ.

ಈ ಸಿಬ್ಬಂದಿಯವರು ಪದೋನ್ನತಿ ಮೇರೆಗೆ ನಿಯೋಜನೆಗೊಂಡ ಸ್ಥಳದಲ್ಲಿ ಕೂಡಲೇ ವರದಿ ಮಾಡಿಕೊಳ್ಳತಕ್ಕದ್ದು. ಒಂದು ವೇಳೆ ಬಡ್ತಿಯನ್ನು ಒಪ್ಪಿಕೊಳ್ಳದೇ ಇದ್ದಲ್ಲಿ ಬಡ್ತಿ ನಿರಾಕರಣೆಯ ಮನವಿಯನ್ನು ಏಳು(7) ದಿನಗಳೊಳಗಾಗಿ ಕೇಂದ್ರ ಕಚೇರಿಗೆ ಸಲ್ಲಿಸತಕ್ಕದ್ದು. ಇಂತಹ ಪ್ರಕರಣಗಳನ್ನು ಸುತ್ತೋಲೆ ಸಂಖ್ಯೆ: 1344, 17-05-2006ರ ಅನ್ವಯ ಕ್ರಮ ಕೈಗೊಳ್ಳಲಾಗುವುದು.

ಮುಂದುವರಿದಂತೆ, ಬಡ್ತಿ ಆದೇಶ ಹೊರಡಿಸಿದ ದಿನಾಂಕದಂದು, ಸಿಬ್ಬಂದಿಗಳ ವಿರುದ್ದ ಪ್ರಸ್ತುತ ಅಪರಾಧ ಪ್ರಕರಣಗಳು ಬಾಕಿ ಇದ್ದಲ್ಲಿ, ದಂಡನೆ ಚಾಲ್ತಿ ಇದ್ದಲ್ಲಿ ಅಥವಾ ಅಮಾನತಿನಲ್ಲಿದ್ದಲ್ಲಿ ಯಾವುದೇ ಕಾರಣಕ್ಕೂ ಬಡ್ತಿಯ ಆದೇಶವನ್ನು ಜಾರಿಗೊಳಿಸತಕ್ಕದ್ದಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...