NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಉಪಾಧ್ಯಕ್ಷರಾಗಿ ಮಹಮ್ಮದ್‌ ರಿಜ್ವಾನ್‌ ನವಾಬ್‌  ನೇಮಕ: ಸರ್ಕಾರದ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾಗಿ ಬೆಂಗಳೂರು ಮಹಾನಗರ ಪಾಲಿಕೆ ಗುರಪ್ಪನಪಾಳ್ಯದ ಮಾಜಿ ಸದಸ್ಯ ಮಹಮ್ಮದ್‌ ರಿಜ್ವಾನ್‌ ನವಾಬ್‌ ನೇಮಕಗೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರಾಗಿರುವ ಮಹಮ್ಮದ್‌ ರಿಜ್ವಾನ್‌ ನವಾಬ್ ಅವರನ್ನು ನಿಗಮದ ಉಪಾಧ್ಯಕ್ಷರಾಗಿ ನೇಮಿಸಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್‌.ಪುಷ್ಪ ಆದೇಶ ಹೊರಡಿಸಿದ್ದಾರೆ.

ರಾಜ್ಯದ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಬುಧವಾರ ಆದೇಶ ಹೊರಡಿಸಿರುವ ವಿ.ಎಸ್‌.ಪುಷ್ಪ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.

ಉಪಾಧ್ಯಕ್ಷ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದು, ಪಕ್ಷ ಹೇಳಿದಂತೆ ನಾನು ಕೆಲಸ ಮಾಡಲು ಸಿದ್ಧ ಎಂದು ಮಹಮ್ಮದ್‌ ರಿಜ್ವಾನ್‌ ನವಾಬ್‌ ತಿಳಿಸಿದ್ದಾರೆ.

ನಾನು KSRTC ಸಂಸ್ಥೆಯ ಉಪಾಧ್ಯಕ್ಷನಾಗುತ್ತೇನೆ ಎಂಬ ನಿರೀಕ್ಷೆ ಮಾಡಿರಲಿಲ್ಲ. ಆದರೆ ನನಗೆ ಗೊತ್ತಿಲ್ಲಂತೆ ಈ ಅಧಿಕಾರ ಸಿಕ್ಕಿದ್ದು, ಇದನ್ನು ನಿಗಮದ ಏಳಿಗಾಗಿ ಉಪಯೋಗಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ