CrimeNEWSನಮ್ಮಜಿಲ್ಲೆ

ತಿ.ನರಸೀಪುರ: ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆ ಜನರಲ್ಲಿ ಆತಂಕ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು ಜನರಲ್ಲಿ ಕೆಲಕಾಲ ಆತಂಕ ಮೂಡಿಸಿತ್ತು.

ಮೈಸೂರು ಜಿಲ್ಲೆಯ ತಿ.ನರಸೀಪುರ-ಮೈಸೂರು ಮುಖ್ಯರಸ್ತೆಯ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಬಳಿ ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಹೋಗಿದ್ದರು.

ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ಪ್ಲಾಸ್ಟಿಕ್ ಕವರ್‌ ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ. ಕೂಡಲೇ ಹೋಟೆಲ್ ಸಿಬ್ಬಂದಿ ಆ ಪ್ಲಾಸ್ಟಿಕ್ ಕವರನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಭೇಟಿ ನೀಡಿ ಸ್ಫೋಟಕಗಳಿದ್ದ ಕವರನ್ನು ಪರಿಶೀಲಿಸಿದ್ದಾರೆ. ಈ ವೇಳೆ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಈ ಸ್ಫೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಹಾಗೂ ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಕೆಗೆ ಬಳಸಲಾಗುವ ವಸ್ತುಗಳಂತೆ ಕಂಡುಬಂದಿವೆ. ಸದ್ಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ