NEWSಸಿನಿಪಥ

‘ಗೋಪಿಲೋಲ’ನ ಹೊಸ ಗಾನಬಜಾನ – ಇದ್ದಕ್ಕಿದ್ದಂಗೆ ಪ್ರಪಂಚವೆಲ್ಲಾ…

ವಿಜಯಪಥ ಸಮಗ್ರ ಸುದ್ದಿ

ಗೋಪಿಲೋಲ ಸಿನಿಮಾ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈಗಾಗಲೇ ಈ ಚಿತ್ರದ ಎರಡು ಗೀತೆಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು, ಇದೀಗ ಮೂರನೇ ಹಾಡು ಬಿಡುಗಡೆ ಮಾಡಲಾಗಿದೆ.

ಕೇಶವ ಚಂದ್ರ ಬರೆದ ಸಾಹಿತ್ಯಕ್ಕೆ ವಿಜಯ್ ಪ್ರಕಾಶ್ ಹಾಗೂ ವಾರಿಜಶ್ರೀ ಕಂಠ ಕುಣಿಸಿದ್ದಾರೆ. ಮಿಥುನ್ ಅಶೋಕನ್ ಟ್ಯೂನ್ ಹಾಕಿದ್ದು, ನಾಯಕ ಮಂಜುನಾಥ್ ಅರಸು ಹಾಗೂ ನಿಮಿಷಾ ಕೆ ಚಂದ್ರ ಇದ್ದಕ್ಕಿದ್ದಂತೆ ಪ್ರಪಂಚವೆಲ್ಲಾ ಯಾಕೋ ಸುತ್ತಿದಂಗೆ ಆಗುತೈತೆ ಅಂತಾ ಕುಣಿದು ಕುಪ್ಪಳಿಸಿದ್ದಾರೆ.

ಆರ್ ರವೀಂದ್ರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಗೋಪಿಲೋಲ ಸಿನಿಮಾವನ್ನು ಎಸ್.ಆರ್. ಸನತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಸಹ ನಿರ್ಮಾಪಕರಾಗಿ ಚಿತ್ರದ ನಾಯಕ ಮಂಜುನಾಥ್ ಅರಸು ಸಾಥ್ ಕೊಟ್ಟಿದ್ದಾರೆ‌.

ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಾಸಂತಿ, ಕೆಂಪೇಗೌಡ, ಡಿಂಗ್ರಿ ನಾಗರಾಜ್, ರೇಖಾ ದಾಸ್, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

ಗೋಪಿಲೋಲ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಸದ್ಯ ಚಿತ್ರತಂಡ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಭರ್ಜರಿಯಾಗಿ ಪ್ರಚಾರ ಕಾರ್ಯ ನಡೆಸುತ್ತಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು