CrimeNEWSನಮ್ಮರಾಜ್ಯ

ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಆರೋಪದಲ್ಲಿ 7 ಅಧಿಕಾರಿಗಳ ಸಸ್ಪೆಂಡ್‌- ಬಳ್ಳಾರಿ ಜೈಲಿಗೆ ದಾಸನ ಸ್ಥಳಾಂತರ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ವಿಲ್ಸನ್ ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಇಬ್ಬರನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ ಎರಡು ದಿನಗಳ ಒಳಗೆ ಬಳ್ಳಾರಿ ಅಥವಾ ಬೆಳಗಾವಿ ಜೈಲಿಗೆ ದರ್ಶನ್ ಅವರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಇಬ್ಬರನ್ನು ಸ್ಥಳಾಂತರ ಮಾಡುವ ಸಂಬಂಧ ಅಧಿಕಾರಿಗಳು ಈಗಾಗಲೇ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಮತ್ತಿತರ ಜತೆ ಕುಳಿತು ಟೀ ಕುಡಿಯುತ್ತ ಸಿಗರೇಟ್‌ ತುಂಡನ್ನು ಎಡಗೈಯಲ್ಲಿ ಹಿಡಿದು ಕೊಂಡಿರುವ ಫೋಟೋ ವೈರಲ್ ಗುತ್ತಿದ್ದಂತೆ ಸರ್ಕಾರ ಈಗಾಗಲೇ 7 ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಜೈಲು ಅಧಿಕಾರಿಗಳಾದ ಶರಣ ಬಸವ ಅಮೀನ್‌ಗಡ್, ಪ್ರಭು ಎಸ್. ಖಂಡೇಲ್‌ವಾಲ್, ಅಸಿಸ್ಟೆಂಟ್ ಜೈಲರ್ಸ್ ಎಲ್.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲವಾರ್, ಹೆಡ್ ವಾರ್ಡರ್ಸ್ ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್ ಕಡಪಟ್ಟಿ, ವಾರ್ಡರ್ ಬಸಪ್ಪ ತೇಲಿ ಅವರನ್ನು ಅಮಾನತು ಮಾಡಲಾಗಿದೆ.

ಈ ಬೆನ್ನಲ್ಲೇ ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಜೈಲಿನಲ್ಲಿ ಈ ರೀತಿ ನಡೆಯಬಾರದು. 7 ಜನ ಭಾಗಿಯಾಗಿದ್ದಾರೆ ಅಂತ ವರದಿ ಬಂದ ಮೇಲೆ ಕ್ರಮ ತೆಗೆದುಕೊಂಡಿದೆ. ಎಲ್ಲ ಜೈಲುಗಳಲ್ಲಿ ಜಾಮರ್, ಕ್ಯಾಮೆರಾ ಹಾಕಿದ್ದರೂ ಹೀಗೆ ಆಗುವುದು ಸರಿಯಲ್ಲ ಎಂದರು.

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಾಗೂ ರೌಡಿಗಳ ಜತೆ ಫೋಟೊ ವೈರಲ್ ಬೆನ್ನಲ್ಲೇ ಆಂತರಿಕ ತನಿಖೆಗೆ ಕಾರಾಗೃಹಗಳ ಡಿಜಿ ಮಾಲಿನಿ ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ.

ರಾಜಾತಿಥ್ಯ ನೀಡಿದ ವಿಚಾರ ಹಾಗೂ ರೌಡಿಗಳ ಜತೆ ಇರಲು ಬಿಟ್ಟಿದ್ದು ಯಾರು ಅನ್ನೋದನ್ನು ಜೈಲಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದಾರೆ ಎಂಬ ಆರೋಪದಡಿ 7 ಮಂದಿ ಅಮಾನತಾಗಿ ಮನೆಯಲ್ಲಿ ಕೂರುವಂತಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್