NEWSನಮ್ಮಜಿಲ್ಲೆನಮ್ಮರಾಜ್ಯ

ಸಂಕಷ್ಟಕ್ಕೆ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮೀ  ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್‌ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ. ಹೀಗಾಗಿ ತಕ್ಷಣ ಫಲಾನುಭವಿಗಳಿಗೆ ಬರಬೇಕಿರುವ ಬಾಕಿ ಕಂತಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲು ಖಜಾನೆಯಲ್ಲಿ ಹಣವಿಲ್ಲದಿರುವುದರಿಂದ ತಾಂತ್ರಿಕ ಕಾರಣಗಳನ್ನು ಕೊಟ್ಟುಕೊಂಡು ದಿನದೂಡಲಾಗುತ್ತಿದೆ ಎಂಬ ಅನುಮಾನ ಜನಸಾಮಾನ್ಯರಲ್ಲಿ ಮೂಡುವಂತಾಗಿದೆ. ಇಂತಹ ಆರೋಪಗಳಿಗೆ ಎಡೆಮಾಡಿಕೊಡದೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆದಾಯ ತೆರಿಗೆ ಇಲಾಖೆ ಹಾಗೂ ವಾಣಿಜ್ಯ ಇಲಾಖೆಯ ಅಧಿಕಾರಿಗಳಿಗೆ ತುರ್ತು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ಕೊಡಬೇಕು. ಫಲಾನುಭವಿಗಳ ಪೈಕಿ ಕೆಲವರು ಪತಿ ಮತ್ತು ಮಕ್ಕಳ ದೆಸೆಯಿಂದ ಮನೆ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. ಹಾಗಾಗಿ ನಿಜವಾದ ಜಿಎಸ್‌ಟಿದಾರರು ಯಾರು ಎಂಬುದನ್ನು ಪತ್ತೆ ಹಚ್ಚಿ ಸಮಸ್ಯೆ ಬಗೆಹರಿಸಬೇಕು ಎಂದು ಚಂದ್ರು ಎಂದು ಒತ್ತಾಯಿಸಿದ್ದಾರೆ.

ಯೋಜನೆಗೆ ಅರ್ಹರಿದ್ದರೂ, ಅನರ್ಹತೆ ಪಟ್ಟಿಯಲ್ಲಿ ಇರುವವರ ಸಂಖ್ಯೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲೇ ಅಧಿಕವಾಗಿದೆ. ಅವುಗಳು ರಾಜ್ಯದಲ್ಲಿ ಅತಿಹೆಚ್ಚು ಬಡವರಿರುವ ಜಿಲ್ಲೆಗಳಾಗಿವೆ. ಆಸ್ಪತ್ರೆ ಖರ್ಚಿಗೆ, ದೈನಂದಿನ ಸಾಂಸಾರಿಕ ಖರ್ಚಿಗೆ, ಮಕ್ಕಳ ಕಲಿಕಾ ಸಾಮಗ್ರಿ-ಬಟ್ಟೆಬರೆಗಳ ಖರ್ಚಿಗೆ ಗೃಹಲಕ್ಷ್ಮೀ ಹಣದ ಮೇಲೆ ಅವಲಂಬಿತರಾಗಿದ್ದಾರೆ.

ಇಂತಹ ಲಕ್ಷಾಂತರ ಮಹಿಳೆಯರಿಗೆ ನಷ್ಟವಾಗಬಾರದು. ಆರ್ಥಿಕವಾಗಿ ಸಮಾಧಾನಕರ ಬದುಕು ಕಟ್ಟಿಕೊಳ್ಳುವಂತಾಗಬೇಕು. ರಾಜ್ಯ ಸರ್ಕಾರ ತಕ್ಷಣ ದೋಷಗಳನ್ನು ಸರಿಪಡಿಸಿ ಹಣವನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ವಿಶ್ವಾಸವಿಟ್ಟು 136 ಸೀಟುಗಳನ್ನು ಕರುಣಿಸಿದ್ದಾರೆ. ಅಂತಹ ತಾಯಂದಿರಿಗೆ ಅನ್ಯಾಯ ಮಾಡುವುದು ಉಚಿತವಲ್ಲ. ಅವರ ಶಾಪಕ್ಕೆ ಒಳಗಾಗದೆ ತಪ್ಪನ್ನು ಸರಿಪಡಿಸಿಕೊಳ್ಳಬೇಕು. ತಡಮಾಡದೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಾಕಿ ಹಣ ಪಾವತಿಸಬೇಕು. ಇಲ್ಲದಿದ್ದರೆ ರಾಜ್ಯದ ಮಹಿಳೆಯರನ್ನು ಒಟ್ಟುಗೂಡಿಸಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪತ್ರದ ಮುಖೇನ ರವಾನಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...