CrimeNEWSನಮ್ಮಜಿಲ್ಲೆ

KKRTC: ಮೊಬೈಲ್‌ ನೋಡಿಕೊಂಡು ಬಸ್‌ ಚಾಲನೆ – ₹5 ಸಾವಿರ ದಂಡ ಕಟ್ಟಿದ ಚಾಲಕ

ವಿಜಯಪಥ ಸಮಗ್ರ ಸುದ್ದಿ

ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ ( Using mobile Phone while driving) ಪ್ರಕರಣದಡಿ 5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು.

ಸಂಸ್ಥೆಯ ಬಸ್ ಚಾಲಕ ಮೊಬೈಲ್‌ ನೋಡಿಕೊಂಡು ಆ.27ರಂದು ಬಸ್‌ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಚಾಲಕನ ಪತ್ತಹಚ್ಚಿ ದಂಡ ವಿಧಿದ್ದಾರೆ.

ಇನ್ನು ವೈರಲ್ ಆಗಿರುವ ವಿಡಿಯೋ ಸಂಬಂಧ ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸತ್ಯಾಸತ್ಯೆಯ ಬಗ್ಗೆ ಪರಿಶೀಲಿಸಿದ್ದು, ಬಸ್ ಚಾಲಕನನ್ನು ಪತ್ತೆ ಮಾಡಿ, ಚಾಲಕನಿಗೆ ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ತಿಳಿ ಹೇಳಿದ್ದಾರೆ.

ಅಲ್ಲದೆ ಚಾಲಕನ ವಿರುದ್ಧಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸ್ಥಳದಂಡ ಪ್ರಕರಣ ದಾಖಲಿಸಿ 5000 ರೂ.ಗಳನ್ನು ದಂಡ ವಿಧಿಸಿದ್ದು ಆ ದಂಡವನ್ನು ಚಾಲಕ ಕಟ್ಟಿ ರಶೀದಿ ಪಡೆದುಕೊಂಡಿದ್ದಾರೆ.

ಸಾರಿಗೆ ಸಂಸ್ಥೆಯ ಚಾಲಕರು ಸೇರಿದಂತೆ ಜಿಲ್ಲೆಯ ಎಲ್ಲ ವಾಹನ ಚಾಲಕರು, ತಮ್ಮ ವಾಹನವನ್ನು ಚಲಾಯಿಸುವಾಗ ಮೊಬೈಲ್‌ ಫೋನ್‌ ಬಳಸಬಾರದು, ಒಂದು ವೇಳೆ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಾಗುವುದು ಎಂದು ಈ ಮೂಲಕ ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು