ಕೃಷ್ಣರಾಜಪೇಟೆ: ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಗ್ರಾಮಾಂತರ ಠಾಣೆಯಲ್ಲಿ ಗ್ರಾಮದ ಸವರ್ಣಿಯ ಯುವಕನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಗ್ರಾಮದ ನಿವಾಸಿ ಕೃಷ್ಣೇಗೌಡ ಎಂಬುವರ ಮಗ ಅನಿಲ್ ಕುಮಾರ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತ ದಲಿತ ಯುವಕ ಜಯಕುಮಾರ್ ಪತ್ನಿ ಲಕ್ಷ್ಮೀ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಅನಿಲ್ ಕುಮಾರ್ ನಾಪತ್ತೆಯಾಗಿದ್ದಾನೆ.
ಘಟನೆ ವಿವರ: ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಎಂಬುವರಿಗೆ ಸೇರಿರುವ ಗ್ರಾಂಟ್ ಜಮೀನಿನಲ್ಲಿ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯ್ತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಜಯಕುಮಾರ್ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮೊನ್ನೆ ಕೂಡ ಈ ವಿಚಾರವಾಗಿ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ ಗದ್ದಲ ನಡೆದಿದ್ದು ನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸಲ್ಲ, ಮೆದೆಗೆ ಬೆಂಕಿ ಹಾಕ್ತಿನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆ ಎಂದು ಸನಿಲ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ನನ್ನ ಪತಿಯ ಸಾವಿಗೆ ಅನಿಲ್ ಕಾರಣ ಎಂದು ಲಕ್ಷ್ಮೀ ದೂರು ನೀಡಿದ್ದಾರೆ.
ಈಗ ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗೆ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ನಾಗಮಂಗಲ ಡಿವೈಎಸ್‌ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುಧಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.
ಈ ವೇಳೆ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಮುಖಂಡರಾದ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಆನಂದ್ ಗೌಡ, ಮೃತ ಜಯಕುಮಾರ್ ಪತ್ನಿ ಲಕ್ಷ್ಮೀ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಕತ್ತರಘಟ್ಟ ಗ್ರಾಮಸ್ಥರು ಇದ್ದರು.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...