NEWSದೇಶ-ವಿದೇಶನಮ್ಮರಾಜ್ಯ

KSRTC: ಕ್ರೀಡಾಭ್ಯಾಸ ನಿರತ ನೌಕರರಿಗೆ ಸೆ.1ರಿಂದ15ರವರೆಗೂ ಕರ್ತವ್ಯದ ಮೇಲೆಂದು ಪರಿಗಣಿಸಿ – ಕಾರ್ಮಿಕ ಕಲ್ಯಾಣಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ
  • ಸೆ.19ರಿಂದ 21ರವರೆಗೆ ವಿಶಾಖಪಟ್ಟಣಂನಲ್ಲಿ ASRTU ವತಿಯಿಂದ ದೇಶದ ಎಲ್ಲ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ನಡೆಯಲಿದೆ ಅಥ್ಲೆಟಿಕ್ ಕ್ರೀಡಾಕೂಟ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ASRTU ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವ ಸಂಸ್ಥೆಯ ಆಟಗಾರರಿಗೆ ಅಭ್ಯಾಸ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕರ್ತವ್ಯದ ಮೇಲೆ ಎಂದು ಪರಿಗಣಿಸಬೇಕು ಎಂದು ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸಂಸ್ಥೆಯ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು ಬೆಂಗಳೂರು ಕೇಂದ್ರೀಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು ಗ್ರಾಮಾಂತರ, ಮೈಸೂರು ನಗರ, ಮಂಡ್ಯ, ಹಾಸನ, ಮಂಗಳೂರು, ಪುತ್ತೂರು, ಶಿವಮೊಗ್ಗ, ಚಿತ್ರದುರ್ಗ, ಕೆಂ.ಬಂ.ನಿ ವಿಭಾಗ ಕಾರ್ಯ ವ್ಯವಸ್ಥಾಪಕರು, ಪ್ರಾ.ಕಾ ಹಾಸನದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ASRTU ವತಿಯಿಂದ ದೇಶದ ಎಲ್ಲ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಥ್ಲೆಟಿಕ್ ಕ್ರೀಡಾಕೂಟವನ್ನು 19.09.2024 ರಿಂದ 21.09.2024 ರವರೆಗೆ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿ. ಈ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ನಿಗಮದ ತಂಡಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ.

ಆ ಮಾಡಲಾದ ಪಟ್ಟಿಯಲ್ಲಿರುವ ಮೇಲ್ವಿಚಾರಕ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಇತರೇ ಕ್ರೀಡಾಪಟುಗಳನ್ನು 01.09.2024 ರಿಂದ 15.09.2024 ರವರೆಗೆ ಕರ್ತವ್ಯದ ಮೇಲೆ ಎಂದು ಪರಿಗಣಿಸಿ ಕ್ರೀಡಾಭ್ಯಾಸಕ್ಕೆ ನಿಯೋಜಿಸಲು ಹಾಗೂ ತಮ್ಮ ವಿಭಾಗ ವ್ಯಾಪ್ತಿಯ ಜಿಲ್ಲಾ ಕ್ರೀಡಾಂಗಣದ ವ್ಯವಸ್ಥಾಪಕರನ್ನು ಸಂಪರ್ಕಿಸಿ, ಕ್ರೀಡಾಪಟುಗಳು ಈ ಅವಧಿಯಲ್ಲಿ ಅಭ್ಯಾಸ ಮಾಡಲು ವ್ಯವಸ್ಥೆ ಮಾಡಲು ಕೋರಿದ್ದಾರೆ.

ಮುಂದುವರಿದು, 16.09.2024ಕ್ಕೆ ವಿಶಾಖಪಟ್ಟಣಂಗೆ ರೈಲ್ವೆ ಪ್ರಯಾಣಕ್ಕೆ ಈಗಾಗಲೇ ಮೂಂಗಡವಾಗಿ ಟಿಕೆಟ್ ಅನ್ನು ಕಾಯ್ದಿರಿಸಿದ್ದು ಎಲ್ಲ ಕ್ರೀಡಾಪಟುಗಳು ಆ ದಿನ ಬೆಳಗ್ಗೆ ಬೆಂಗಳೂರಿನಲ್ಲಿ ಹಾಜರಿರುವಂತೆ ಸೂಚಿಸಿ, ಸಂಚಲನಾ ಆದೇಶ ನೀಡಲು ತಿಳಿಸಿದ್ದಾರೆ.

ನೇರ ನಿಗಾವಹಿಸಿ ಕ್ರೀಡಾಪಟುಗಳು ನಿರಂತರ ಅಭ್ಯಾಸದಲ್ಲಿರುವ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಂಡು ಆಗಿಂದ್ದಾಗೆ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ವಿಭಾಗದ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ಸೂಚಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ