NEWSನಮ್ಮಜಿಲ್ಲೆಬೆಂಗಳೂರು

ಬಿಬಿಎಂಪಿ- ಬಾಕಿಯಿರುವ ನೂರಾರು ಕೋಟಿ ರೂ. ಆಸ್ತಿ ತೆರಿಗೆ ತಕ್ಷಣ ವಸೂಲಿ ಮಾಡಿ: ಎಎಪಿಯ ಮೋಹನ ದಾಸರಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು, ತೆರಿಗೆ ಕಟ್ಟುವ ವಿಚಾರದಲ್ಲಿ ಬಿಬಿಎಂಪಿಯನ್ನು ಯಾಮಾರಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ದಾಸರಿ, ಸರಿಯಾಗಿ ಬಾಡಿಗೆ ಕಟ್ಟುತ್ತಿಲ್ಲ ಎಂದು ಕಾರಣ ನೀಡಿ ಬಿಬಿಎಂಪಿ ಕಟ್ಟಡದಲ್ಲಿದ್ದ ಎರಡು ಅಂಚೆ ಕಚೇರಿಗಳನ್ನು ಬಿಬಿಎಂಪಿ ಬಾಗಿಲು ಹಾಕಿಸಿತ್ತು. ಆದರೆ ಇಲ್ಲಿ ನೋಡಿದರೆ 900 ರಿಂದ 1000 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇದೆ. ತೆರಿಗೆ ಬಾಕಿ ಉಳಿಸಿಕೊಂಡವರು ಪ್ರತಿಷ್ಠಿತರಾಗಿದ್ದು ಬಿಬಿಎಂಪಿಗೆ ಅವರಿಗೆ ನೋಟಿಸ್‌ಕೊಡುವ ಧೈರ್ಯ ಕೂಡ ಇಲ್ಲದಂತಾಗಿದೆ ಎಂದರು.

ತೆರಿಗೆ ಕಟ್ಟದವರ ಆಸ್ತಿಗಳನ್ನು ಬಿಬಿಎಂಪಿ ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು, ವಿಜಯ್ ಮಲ್ಯ ಅವರ ಯುನೈಟೆಡ್ ಬ್ರಿವರೀಸ್, ಎಂಬೆಸ್ಸಿ ಗ್ರೂಪ್ ಸೇರಿದಂತೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಕೋಟ್ಯಾಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿವೆ. ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್, ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರೇ ಈ ಬಗ್ಗೆ ಮೊದಲು ಗಮನ ಹರಿಸಿ, ಸರ್ಕಾರಕ್ಕೆ ಮೋಸ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದರು.

ಮೊದಲೆಲ್ಲಾ ಬಿಬಿಎಂಪಿಗೆ ತೆರಿಗೆ ಕಟ್ಟದೇ ಇದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿತ್ತು. ಇದೀಗ ಕಾರ್ಪೊರೇಟರ್, ಶಾಸಕರು, ಅಧಿಕಾರಿಗಳು ಶಾಮೀಲಾಗಿದ್ದು ತೆರಿಗೆ ಕಟ್ಟದವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದರು. ಜನ ರೊಚ್ಚಿಗೇಳುವ ಮೊದಲು ಬಿಬಿಎಂಪಿ ಮತ್ತು ಸಚಿವ ಡಿಕೆ ಶಿವಕುಮಾರ್ ಎಚ್ಚೆತ್ತು, ತೆರಿಗೆ ಕಟ್ಟದ ಪ್ರಭಾವಿಗಳ ಮೇಲೆ ಕ್ರಮ ತೆಗೆದುಕೊಂಡು ಮಾದರಿಯಾಗಬೇಕು ಎಂದರು.

ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಮಾತನಾಡಿ, ಬಿಬಿಎಂಪಿ ಏನೋ ತೆರಿಗೆ ಬಾಕಿ ಇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಆದರೆ ಅವರಿಂದ ತೆರಿಗೆ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿದರೆ ರಾಜಕೀಯ ಬೆಂಬಲ ಇರುವವರು ಯಾವ ರೀತಿ ಲಾಭ ಪಡೆಯುತ್ತಿದ್ದಾರೆ ಗೊತ್ತಾಗುತ್ತದೆ ಎಂದರೆ. ಬ್ರಾಂಡ್ ಬೆಂಗಳೂರು ಎಂದು ಡಿಕೆ ಶಿವಕುಮಾರ್ ದೊಡ್ಡದಾಗಿ ಹೇಳುತ್ತಿದ್ದಾರೆ. ಅವರ ಸ್ನೇಹಿತರು, ಪರಿಚಯದವರೇ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂದರು.

ಒಟಿಎಸ್‌ಯೋಜನೆಯಲ್ಲಿ 3.95 ಲಕ್ಷ ಜನ ಬೆಂಗಳೂರಿನಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂದರೆ, ಯಾವ ರೀತಿಯ ಅಭಿವೃದ್ಧಿ ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು. ಒಟಿಎಸ್‌ಯೋಜನೆಯಡಿ 1 ಲಕ್ಷ ಜನ 150 ಕೋಟಿ ರೂಪಾಯಿ ತೆರಿಗೆ ಕಟ್ಟಿದ್ದಾರೆ. ಇನ್ನೂ 600 ಕೋಟಿ ರೂಪಾಯಿ ತೆರಿಗೆ ಬಿಬಿಎಂಪಿಗೆ ಬರಬೇಕಾಗಿದೆ, ಇದರ ಜವಾಬ್ದಾರಿ ವಹಿಸಿಕೊಳ್ಳುವುದು ಯಾರು ಎಂದು ಪ್ರಶ್ನೆ ಮಾಡಿದರು.

ಬಿಎಂಟಿಸಿ, ಬಿಎಂಆರ್ ಸಿಎಲ್, ಸರ್ಕಾರಿ ಸಹಯೋಗದ ಕಂಪನಿ, ನಿಗಮಗಳು ತೆರಿಗೆಯನ್ನು ಕಟ್ಟಿಲ್ಲ. ಪ್ರತಿಷ್ಠಿತ ಕಾಂಟ್ರಾಕ್ಟರ್ಸ್‌ಗಳಾದ ಡಿಎಸ್‌ಮ್ಯಾಕ್ಸ್, ಎಂಬೆಸ್ಸಿ ತೆರಿಗೆ ಕಟ್ಟಿಲ್ಲ, ಶಿಕ್ಷಣ ಸಂಸ್ಥೆಗಳಾದ ಕೆಪಿಜಿ, ಒಎಸ್‌ಯು ಕೂಡ ತೆರಿಗೆ ಕಟ್ಟಿಲ್ಲ. ವಿಧಾನಸಭಾ ಸದಸ್ಯರ ಕುಟುಂಬಸ್ಥರು ಕೂಡ ತೆರಿಗೆ ಕಟ್ಟಿಲ್ಲ. ಇಂತಹ ದೊಡ್ಡ ದೊಡ್ಡವರ ತೆರಿಗೆ ಉಳಿಸಲು ಸ್ಕೀಂ ತರಲು ಮುಂದಾಗಿದ್ದಾರೆ.

ಮೇವರಿಕ್ ಹೋಲ್ಡಿಂಗ್ಸ್ 60 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರು ಕೂಡ ಡಿಕೆ ಶಿವಕುಮಾರ್ ಅವರಿಗೆ ಬಿಡಿಎ ಕಾಂಪ್ಲೆಕ್ಸ್ ಅನ್ನು ಕಟ್ಟಲು ಅನುಮತಿ ಕೊಟ್ಟಿದ್ದಾರೆ. ನೀವೇನಾದರೂ ಬಾಕಿ ಇರುವ ತೆರಿಗೆ ವಸೂಲಿ ಮಾಡದೇ ಇದ್ದರೆ ಅಥವಾ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳದೆ ಇದ್ದರೆ, ಆಮ್ ಆದ್ಮಿ ಪಾರ್ಟಿ ವತಿಯಿಂದ ಕರ ನಿರಾಕರಣೆ ಚಳವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಜಗದೀಶ್ ಬಾಬು, ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಗೂ ಬೆಂಗಳೂರು ಮಹಿಳಾ ಘಟಕದ ಮುಖಂಡರಾದ ಅಂಜನಾ ಗೌಡ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!