Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡಲಾಗುವುದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಭರವಸೆ ನೀಡಿದ್ದಾರೆ.

ದೆಹಲಿಯ ಉದ್ಯೋಗ ಭವನದಲ್ಲಿರುವ ಬೃಹತ್‌ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ ಪಾಟೀಲ್ ಅವರು, ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

ಇನ್ನು ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು, ಎಂ.ಬಿ.ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಅಲ್ಲದೆ ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಅಂಶಗಳ ಬಗ್ಗೆ ಇದೇ ವೇಳೆ ಉಬಯ ಸಚಿವರು ಚರ್ಚಿಸಿದರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಪಾಟೀಲ್ ಅವರಿಗೆ ಹೇಳಿದರು.

ಈ ಸಂದರ್ಭದಲ್ಲಿ HMT ಭೂ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ ಎಂದರು.

ಇನ್ನು ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು.

ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ