CrimeNEWSನಮ್ಮಜಿಲ್ಲೆ

KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗ ತುಮಕೂರು ಘಟಕ 1&2ರ ವ್ಯವಸ್ಥಾಪಕರು, ಕುಣಿಗಲ್, ತುರುವೇಕೆರೆ, ತಿಪಟೂರು, ಸಿರಾ, ಮಧುಗಿರಿ, ಘಟಕ ವ್ಯವಸ್ಥಾಪಕರು ಮಾರಣಾಂತಿಕ/ಗಂಭೀರ ಅಪಘಾತದಲ್ಲಿ ಭಾಗಿಯಾದ ಚಾಲನಾ ಸಿಬ್ಬಂದಿಗಳ ಚಾಲನಾ ಪರವಾನಗಿಯನ್ನು ಅಮಾನತು ಮಾಡಿದ್ದು ಪರಿಶೀಲಿಸಬೇಕೆಂದು ವಿಭಾಗೀಯ ನಿಯಂತ್ರಣಾಧಿಕಾರಿ ಸೂಚನೆ ನೀಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಿಗಮದ ವಾಹನದ ಚಾಲಕರು ಮಾರಣಾಂತಿಕ/ ಗಂಭೀರ ಅಪಘಾತಗಳಲ್ಲಿ ಭಾಗಿಯಾದ ಸಂದರ್ಭದಲ್ಲಿ ಚಾಲಕರ ಚಾಲನಾ ಪರವಾನಗಿಯನ್ನು ಆ‌ರ್‌ಟಿಒ ಇಲಾಖೆಯಿಂದ ಅಮಾನತುಗೊಳಿಸಿದ್ದಲ್ಲಿ, ಅಂತಹ ಚಾಲಕರನ್ನು ಅನುಸೂಚಿ ಕರ್ತವ್ಯಕ್ಕೆ ನಿಯೋಜಿಸಲು ಸಾಧ್ಯವಾಗುವುದಿಲ್ಲ ಹಾಗೂ ಅನ್ಯ ಕರ್ತವ್ಯಕ್ಕೆ ನಿಯೋಜಿಸಲು ಅವಕಾಶವಿರುವುದಿಲ್ಲ.

ಮುಂದುವರೆದಂತೆ ಮಾರಣಾಂತಿಕ/ ಗಂಭೀರ ಅಪಘಾತಗಳಲ್ಲಿ ಭಾಗಿಯಾದ ಚಾಲಕರನ್ನು ನಿಗಮದ ನಿಯಮಾವಳಿಗಳನ್ವಯ ಅಮಾನತಿನಲ್ಲಿಟ್ಟು. 30 ದಿನಗಳ ನಂತರ ಅಮಾನತಿನಿಂದ ತೆರವುಗೊಳಿಸಲಾಗುವುದು.

ಒಂದು ವೇಳೆ ಈ ಚಾಲಕರ ಚಾಲನಾ ಪರವಾಗಿಯನ್ನು ಆ‌ರ್‌ಟಿಒ ಇಲಾಖೆಯಿಂದ ಅಮಾನತುಗೊಳಿಸಿದ್ದಲ್ಲಿ ಸಿಬ್ಬಂದಿಗಳ ವಿವರಗಳನ್ನು ಸಂಚಾರ ಶಾಖೆಗೆ ಕಳುಹಿಸುವುದು. ಅನಂತರ ಅಮಾನತಿನಿಂದ ತೆರವುಗೊಂಡು ಘಟಕ ನಿಯೋಜನೆಯಾದ ಮೇಲೆ ಖಡ್ಡಾಯವಾಗಿ ಚಾಲಕರುಗಳ ಚಾಲನಾ ಪರವಾನಗಿಯನ್ನು ಪರಿಶೀಲಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು.

ಚಾಲನಾ ಪರವಾನಗಿ ಇಲ್ಲದೇ ಇರುವ ಚಾಲಕರುಗಳನ್ನು ಕರ್ತವ್ಯಕ್ಕೆ ನಿಯೋಜಿಸುವಂತಿಲ್ಲ. ತಪ್ಪಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಎಲ್ಲ ಘಟಕ ವ್ಯವಸ್ಥಾಪಕರು, ವಿಭಾಗದ ಎಲ್ಲ ಘಟಕಗಳ ಉಸ್ತುವಾರಿ ಅಧಿಕಾರಿಗಳಿಗೆ  ಸೂಚಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್