VIJAYAPATHA.IN > ವಿಜಯಪಥ > NEWS > Crime > ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ಭೇದಿ, ಓರ್ವ ಮೃತ
ಮೈಸೂರು: ಕಲುಷಿತ ನೀರು ಸೇವಿಸಿ 12 ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೋವಿಂದೇಗೌಡ (65 ವರ್ಷ) ಮೃತರು. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಗೋವಿಂದೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇತ್ತ ವಿಯ ತಿಳಿಯುತ್ತಿದ್ದಂತೆ ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಜನರ ಆರೋಗ್ಯ ತಪಾಸಣೆ ನಡೆಸಿದ್ದಾರೆ.
Related
Deva
Leave a reply
You Might Also Like
ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್
January 27, 2025
ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ FIR ದಾಖಲಿಸಿ: ತುಷಾರ್ ಗಿರಿನಾಥ್
January 27, 2025