Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮೈಸೂರಿನ ರಾಜಮನೆತನ ವಿರೋಧ ವ್ಯಕ್ತಪಡಿಸಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದು, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆ ಇದೆ ಎಂದು ಹೇಳುವ ಮೂಲಕ ಸಿಎಂ ನಡೆ ಸರಿ ಇದೆ ಎಂದು ಹೇಳಿದ್ದಾರೆ.

ಬೆಟ್ಟಕ್ಕೆ ಪೊಲೀಸ್‌ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲ ಆಗಬೇಕಾದರೆ ಒಂದು ಪ್ರಾಧಿಕಾರ ಬೇಕೇಬೇಕು. ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಅವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ.

ಆಸ್ತಿ ಗಲಾಟೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಹೇಳುವ ಮೂಲಕ ಚಾಮುಂಡಿ ಬೆಟ್ಟದ ಪ್ರಾಧಿಕಾರದ ಪರ ಬ್ಯಾಟಿಂಗ್‌ ಬೀಸಿದ್ದಾರೆ.

ಅಮೃತ್ ಯೋಜನೆ ಕುಡಿಯುವ ನೀರು ಬೆಟ್ಟಕ್ಕೆ ತಲುಪದೇ ಇರಲು ಕಾರಣ ಯಾರು? ನಾನು ಹೇಳಿದರೆ ವಿವಾದ ಆಗುತ್ತದೆ. ಪೈಪ್‌ಲೈನ್ ಎಲ್ಲಿ ತಡೆದು ನಿಂತಿದೆ? ನೀವೇ ಹೋಗಿ ಹುಡುಕಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಂಸದ ಯದುವೀರ್ ಒಡೆಯರ್‌ಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಯುದವೀರ್‌ ಹೇಳಿದ್ದೇನು?: ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು. ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ ಜತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದ್ದರು.

ಹಿನ್ನೆಲೆ ಏನು?: ಚಾಮುಂಡಿ ಬೆಟ್ಟವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದ ಸರ್ಕಾರ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈ ಪ್ರಾಧಿಕಾರ ರಚನೆಗೆ ರಾಜಮನೆತನ ವಿರೋಧ ವ್ಯಕ್ತಪಡಿಸಿದೆ. ರಾಜಮನೆತನದ ವಿರೋಧದ ನಡೆವೆಯೂ ಸೆ.3 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಧಿಕಾರದ ಮೊದಲ ಸಭೆ ನಡೆದಿತ್ತು.

ಕೋರ್ಟ್‌ನಲ್ಲಿದೆ ಪ್ರಕರಣ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಮೈಸೂರು ಮಹಾರಾಜ ಮನೆತನದ ಪ್ರಮೋದಾದೇವಿ ಒಡೆಯರ್‌ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ವಿಚಾರಣೆಯ ವೇಳೆ ರಾಜವಂಶ ಪರ ವಕೀಲರು, ಚಾಮುಂಡೇಶ್ವರಿ ಕ್ಷೇತ್ರದ ಮಾಲೀಕತ್ವದ ಬಗ್ಗೆ ಕಳೆದ 20 ವರ್ಷಗಳಿಗೂ ಹಿಂದಿನಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆದಿದೆ.

ರಾಜಮನೆತನ ಸಲ್ಲಿಸಿದ್ದ ಅರ್ಜಿಯನ್ನು 2004ರಲ್ಲಿ ಹೈಕೋರ್ಟ್‌ ವಜಾಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ಹಂತದಲ್ಲಿದೆ ಎಂದು ಗಮನಕ್ಕೆ ತಂದಿದ್ದರು. ಈ ವಾದವನ್ನು ಅಲಿಸಿದ ಬಳಿಕ ಹೈಕೋರ್ಟ್‌ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಿರ ಮತ್ತು ಚರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಸೆ.25ಕ್ಕೆ ಅರ್ಜಿಯನ್ನು ಮುಂದೂಡಿದೆ.

ವಿಜಯಪಥ  ವೆಬ್‌ಸೈಟ್ ಸಂಪಾದಕರಾದ ದೇವರಾಜು  

  • ವಿಜಯಪಥ ಕನ್ನಡದ ಜನಪ್ರಿಯ ಸುದ್ದಿ ವೆಬ್‌ಸೈಟ್ ಆಗಿದ್ದು, ರಾಜ್ಯ ಮತ್ತು ದೇಶದಲ್ಲಿ ನಡೆಯುವ ಪ್ರಮುಖ ಸುದ್ದಿಗಳನ್ನು ಒದಗಿಸುತ್ತದೆ. ಈ ವೆಬ್‌ಸೈಟ್‌ನ ಸಂಪಾದಕರಾಗಿರುವ ದೇವರಾಜು ಅವರು ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸ್ಥಾನವನ್ನು ಹೊಂದಿದ್ದಾರೆ.
  • ದೇವರಾಜು  ಅವರ ಕೊಡುಗೆಗಳು: * ಸುದ್ದಿ ವರದಿಗಾರಿಕೆ: ದೇವರಾಜು ಅವರು ವಿವಿಧ ಕ್ಷೇತ್ರಗಳಲ್ಲಿ ಸುದ್ದಿಗಳನ್ನು ಸಂಗ್ರಹಿಸಿ, ವಿಶ್ಲೇಷಿಸಿ, ಪ್ರಕಟಿಸುವ ಮೂಲಕ ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಳೆದ 18 ವರ್ಷಗಳಿಂದಲೂ ಗಣನೀಯ ಕೊಡುಗೆ ನೀಡಿದ್ದಾರೆ. ಮೈಸೂರಿನ ಪ್ರಾದೇಶಿಕ ಪತ್ರಿಕೆಗಾಳಾದ ಮೈಸೂರು ಮಿತ್ರ, ಪ್ರಜಾನುಡಿ ಹಾಗೂ ರಾಜ್ಯ ಪತ್ರಿಕೆಗಳಾದ ಹೊಸದಿಗಂತ, ವಿಜಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಹಾಗೂ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿರುವ ಇವರು 20219ರ ನವೆಂಬರ್‌ 1ರಂದು ವಿಜಯಪಥ ಕನ್ನಡದ ಜನಪ್ರಿಯ ಸುದ್ದಿ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ನಿರಂತವರಾಗಿ ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಗೆ ಕಾರಣರಾಗಿದ್ದಾರೆ.
* ಕನ್ನಡ ಪತ್ರಿಕೋದ್ಯಮದ ಬೆಳವಣಿಗೆ: ವಿಜಯಪಥದ ಮೂಲಕ ಕನ್ನಡ ಭಾಷೆಯಲ್ಲಿ ಗುಣಮಟ್ಟದ ಸುದ್ದಿಗಳನ್ನು ಒದಗಿಸುವ ಮೂಲಕ ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಗೆ ಕಾರಣರಾಗಿದ್ದಾರೆ. * ಸಾಮಾಜಿಕ ಜವಾಬ್ದಾರಿ: ಸಮಾಜದ ವಿವಿಧ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ವಿಜಯಪಥದ ಮೂಲಕ ಮಾಡುತ್ತಿದ್ದಾರೆ.
  • ವಿಜಯಪಥ ವೆಬ್‌ಸೈಟ್‌ನ ವಿಶೇಷತೆಗಳು * ವಿವಿಧ ವಿಭಾಗಗಳು: ಪ್ರಮುಖವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ ಸಮಸ್ಯೆ, ಭ್ರಷ್ಟಾಚಾರ, ರಾಜಕೀಯ, ಆರ್ಥಿಕ, ಸಾಮಾಜಿಕ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. * ತಾಜಾ ಸುದ್ದಿ: ಘಟನೆ ನಡೆದ ತಕ್ಷಣ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಓದುಗರಿಗೆ ತಾಜಾ ಮಾಹಿತಿಯನ್ನು ಒದಗಿಸುತ್ತದೆ. * ವಿಶ್ಲೇಷಣಾತ್ಮಕ ಲೇಖನಗಳು: ಸುದ್ದಿಗಳಿಗೆ ಸಂಬಂಧಿಸಿದ ವಿಶ್ಲೇಷಣಾತ್ಮಕ ಲೇಖನಗಳು ಮತ್ತು ವರದಿಗಳನ್ನು ಪ್ರಕಟಿಸುವ ಮೂಲಕ ಓದುಗರಿಗೆ ಆಳವಾದ ತಿಳಿವಳಿಕೆಯನ್ನು ನೀಡುತ್ತದೆ.
ವಿಜಯಪಥ ಮತ್ತು ದೇವರಾಜು ಅವರ ಕೊಡುಗೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನೀವು ವೆಬ್‌ಸೈಟ್ ಅನ್ನು ನೇರವಾಗಿ ಭೇಟಿ ಮಾಡಬಹುದು. ವಿಜಯಪಥ ವೆಬ್‌ಸೈಟ್: https://vijayapatha.in/  

Leave a Reply

error: Content is protected !!
LATEST
ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್ KPSC ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಜ.31-ಫೆ.2ರಂದು ಹೆಚ್ಚುವರಿ ಸರ್ಕಾರಿ ಬಸ್‌ ಬಿಡಲು ಮನವಿ ಮೈಕ್ರೋ ಫೈನಾನ್ಸ್ ಹಾವಳಿಗೆ ಹೆದರಿ ಜನ ಆತ್ಮಹತ್ಯೆಗೆ ಶರಣು: ವಿಪಕ್ಷ ನಾಯಕ ಅಶೋಕ್ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ FIR ದಾಖಲಿಸಿ: ತುಷಾರ್ ಗಿರಿನಾಥ್ ಬಸ್‌ನಿಂದ ಇಳಿಯುವ ವೇಳೆ ಆಯತಪ್ಪಿ ಬಿದ್ದ ಮಹಿಳೆಗೆ ಗಂಭೀರ ಗಾಯ