ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮನೆಯ ಮೇಲಿಂದ ಬಿದ್ದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅನಿಲ್ ಅರೋರಾ ಸೆ. 11ರ ಬುಧವಾರ ಬೆಳಗ್ಗೆ ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದು ಅವರೊಂದಿಗೆ ನಟಿಯ ಮಾಜಿ ಪತಿ ಅರ್ಬಾಜ್ ಖಾನ್ ಕೂಡ ಭೇಟಿ ನೀಡಿದ್ದಾರೆ.
ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇತ್ತ ಅನಿಲ್ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.