ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ ಮಂಗಳವಾರವೂ ಮುಂದುವರಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಕೆಲವೆಡೆ ಮನೆಗಳಿಗೆ ನೀರುನುಗ್ಗಿ ಅವಾಂತರ ಸೃಷ್ಟಿಸಿದರೆ ಇನ್ನೂ ಹಲವೆಡೆ ಸಂಚಾರ ದಟ್ಟಣೆ ಉಂಟಾಯಿತು.
ಇನ್ನು ಈ ಮಳೆಯಿಂದ ರಾಜ್ಯದಲ್ಲಿ ಭಾರಿ ಅನಾಹುತಗಳೆ ನಡೆದಿದ್ದು ಐವರು ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಸಾಯಿ ಲೇಔಟ್ ದ್ವೀಪದಂತ್ತಾಗಿದೆ. ಇಲ್ಲಿನ ಮನೆಗಳ ನೆಲ ಮಹಡಿ ಅರ್ಧ ಮುಳುಗಿದ್ದು, ಜನರು ಮನೆಗಳಿಂದ ಹೊರಬರಲು ಸಾಧ್ಯವಾಗದಷ್ಟು ಅವಾಂತರ ಸೃಷ್ಟಿಸಿದೆ.
ಸೋಮವಾರ ಅಂದರೆ ನಿನ್ನೆ ಸುಮಾರು 150 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾಯಿ ಲೇಔಟ್‌ನಲ್ಲಿ ಜನರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆಕೂಡ ಮಾಡಿತ್ತು.
ಇತ್ತ ಸಾಯಿ ಲೇಔಟ್‌ನ ನಿವಾಸಿಗಳ ಸಂಕಷ್ಟಕ್ಕೆ ಪಾಲಿಕೆ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೂಡ ನಿವಾಸಿಗಳಿಂದ ಕೇಳಿ ಬರುತ್ತಿವೆ. ನಗರದ ಹೆಣ್ಣೂರಿನಲ್ಲಿರುವ ಅನಾಥಾಶ್ರಮವು ಸಹ ಮಳೆಯ ತೀವ್ರತೆಯನ್ನು ಅನುಭವಿಸಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ, ವಿಪತ್ತು ನಿರ್ವಹಣಾ ಪಡೆ ಅನಾಥಾಶ್ರಮದ ಜನರನ್ನು ರಕ್ಷಿಸಿ ಸುರಕ್ಷಿತವಾಗಿರಿಸಿದೆ.
ಬಹುರಾಷ್ಟ್ರೀಯ ಕಂಪನಿಗಳ ಕಚೇರಿಗಳನ್ನು ಹೊಂದಿರುವ ಮಾನ್ಯತಾ ಟೆಕ್ ಪಾರ್ಕ್ ಬಳಿ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಹಲವು ಸ್ಥಳಗಳಲ್ಲಿ ಮೊಣಕಾಲಿನವರೆಗೆ ತುಂಬಿದ ನೀರಿನಲ್ಲಿ ಪ್ರಯಾಣಿಕರು ಕಷ್ಟಪಟ್ಟು ಪ್ರಯಾಣಿಸಬೇಕಾಯಿತು. ನಗರದ ರಸ್ತೆಗಳಲ್ಲಿ ಹೊಸ ಗುಂಡಿಗಳು ಕಾಣಿಸಿಕೊಂಡು ವಾಹನ ಸವಾರರಿಗೆ ಅಪಾಯವನ್ನುಂಟುಮಾಡಿದವು. ನೀರು ತುಂಬಿದ್ದರಿಂದ ವಾಹನಗಳು ಹಳ್ಳಕ್ಕೆ ಬಿದ್ದು ಸಿಲುಕಿಕೊಂಡಿದ್ದವು. ಇದರಿಂದ ಹಲವು ಭಾಗಗಳಲ್ಲಿ ದೀರ್ಘಕಾಲದವರೆಗೂ ಸಂಚಾರ ದಟ್ಟಣೆ ಉಂಟಾಯಿತು.
ಇನ್ನು ಮೈಕೋ ಲೇಔಟ್ ಒಂದರ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ಮಳೆನೀರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದಾಗ 12 ವರ್ಷದ ಬಾಲಕ ಸೇರಿದಂತೆ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬಿಟಿಎಂ 2 ನೇ ಹಂತದ ಬಳಿಯ ಎನ್ಎಸ್ ಪಾಳ್ಯದ ಮಧುವನ್ ಅಪಾರ್ಟ್‌ಮೆಂಟ್ ನಿವಾಸಿ ಮನಮೋಹನ್ ಕಾಮತ್ (63) ನಿನ್ನೆ ಸಂಜೆ ತನ್ನ ಮನೆಯಿಂದ ನೀರನ್ನು ಹೊರಹಾಕಲು ಪಂಪ್ ಬಳಸಲು ಪ್ರಯತ್ನಿಸಿದ್ದರು.
ಪಂಪ್‌ನ್ನು ಸಾಕೆಟ್‌ಗೆ ಸಂಪರ್ಕಿಸಿದಾಗ, ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಆಘಾತಕ್ಕೆ ಒಳಗಾದರು. ಕಾಮತ್ ಬಳಿಯ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಕೆಲಸ ಮಾಡುತ್ತಿದ್ದ ನೇಪಾಳದ ವ್ಯಕ್ತಿಯ ಮಗ ದಿನೇಶ್ (12) ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಎರಡೂ ಪ್ರಕರಣಗಳಲ್ಲಿ ಅಸ್ವಾಭಾವಿಕ ಸಾವಿನ ವರದಿಗಳು (ಯುಡಿಆರ್‌ಗಳು) ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ: ಸೋಮವಾರ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಂಪನಿಯಲ್ಲಿ ಕೆಲಸದಾಕೆ ಶಶಿಕಲಾ (35) ಎಂಬುವರ ಮೇಲೆ ಕಾಂಪೌಂಡ್ ಗೋಡೆ ಬಿದ್ದು ಮೃತಪಟ್ಟಿದ್ದಾರೆ. ಇನ್ನು ರಾಯಚೂರು ಮತ್ತು ಕಾರವಾರದಲ್ಲಿ ಸಿಡಿಲಿಗೆ ಇಬ್ಬರು ಮೃತಪಟ್ಟಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 30 ಮಿ.ಮೀ ಮಳೆಯಾಗಿದೆ. ಮೂರು ದಿನಗಳಿಂದ ಸುರಿದ ವರುಣನಿಂದ ನಗರದಲ್ಲಿ 105 ಮಿ.ಮೀ ಮಳೆ ದಾಖಲಾಗಿದೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...