CRIMENEWSನಮ್ಮಜಿಲ್ಲೆ

KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸೇರಿ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರೂ ಸೇರಿದಂತೆ 35ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ಇಂದು ನಡೆದಿದೆ.

ಅಪಘಾತದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಕೆಂಪಣ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೊಬ್ಬ ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಮತ್ತು ನಂಜನಗೂಡು ಮಾರ್ಗವಾಗಿ ಚಾಮರಾಜನಗರ ಕಡೆಗೆ ಹೋಗುತ್ತಿದ್ದ ಬಸ್ ನಡುವೆ ಈ ಮುಖಾಮುಖಿ ಡಿಕ್ಕಿಯಾಗಿದೆ. ಬಸ್‌ಗಳು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಚಾಲಕರಿಗೂ ಗಾಯವಾಗಿದ್ದು ಅದರಲ್ಲಿ ಕೆಂಪಣ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 35 ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Megha
the authorMegha

Leave a Reply

error: Content is protected !!