ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 4 ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್ ನಮಗೆ ಬೇಡ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಕೊಡಬೇಕು. ಅದೂ ಕೂಡ ವಿಧಾನಸಭೆ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮನವಿ ಮಾಡಿದರು.
ಸಾರಿಗೆ ನೌಕರರ ಒಕ್ಕೂಟ ನಗರದ ಟೌನ್‌ಹಾಲ್‌ನಲ್ಲಿ ಇಂದು ಆಯೋಜಿಸಿದ್ದ ಸಾಧಕರಿಗೆ ಮತ್ತು ಮುಷ್ಕರ ವೇಳೆ ನಿವೃತ್ತರಾದ ನೌಕರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನೌಕರರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯ ಸಾರಿಗೆ ನಿಗಮಗಳ ಅಭಿವೃದ್ಧಿಯೂ ಪ್ರಮುಖವಾಗಿದೆ. ಹೀಗಾಗಿ ಸಾರಿಗೆ ಸಚಿವರು, ಅಧಿಕಾರಿಗಳು ಅಧ್ಯಕ್ಷರು ಈ ನಿಟ್ಟಿನಲ್ಲಿ ನೌಕರರ ಪರ ನಿಂತಿದ್ದದಾರೆ. ಅವರಿಗೆ ಅಭಿನಂದನೆ. ಜತೆಗೆ ಮುಷ್ಕರದ ವೇಳೆ ನಿವೃತ್ತರಾದ ನೌಕರರು ಮತ್ತು ನೌಕರರ ಪ್ರತಿಭಾವಂತ ಮಕ್ಕಳಿಗೆ ಅಭಿನಂದನೆ ಸಲ್ಲಿಸಬೇಕಿದ್ದು ಅದಕ್ಕೆ ಈಗ ಕಾಲ ಕೂಡಿ ಬಂದಿದೆ ಎಂದರು.
ಇನ್ನು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಪ್ರೊ. ಕೆ.ಈ. ರಾಧಾಕೃಷ್ಣ ಅವರು ನಮ್ಮ ಸಾರಿಗೆ ನೌಕರರ ಕಷ್ಟಗಳನ್ನು ಅರಿತು ಅವುಗಳನ್ನು ಈಡೇರಿಸುವುದಕ್ಕೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದು ಅವರ ನಮ್ಮ ಪರ ಕಾಳಜಿಗೆ ನಾವು ಚಿರರುಣಿಯಾಗಿದ್ದೇವೆ.
ಅಂತ್ಯೆಯೆ 2019ರಲ್ಲಿ ಇದೇ ಟೌನ್‌ಹಾಲ್‌ಮುಂದೆ ನಾವು ಧ್ವನಿ ಎತ್ತಿದೆವು. ಅಂದಿನ ನಮ್ಮ ಕೂಗು ನಮಗೆ ಸರ್ಕಾರಿ ನೌಕರರನ್ನಾಗಿ ಮಾಡಬೇಕು. ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂಬುವುದಾಗಿತ್ತು. ಅಂದು ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದಂತೆ ವೇತನ ಹೆಚ್ಚಳವಾದಾಗಲೇ ನಮಗೂ ಆಗಬೇಕು. 4 ವರ್ಷಕೊಮ್ಮೆ ಮುಷ್ಕರ ಮಾಡಿ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ದೃಷ್ಟಿಯಿಂದ ನೌಕರರು ಒಗ್ಗಟ್ಟಾದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಂದು ನಮಗೆ ಭರವಸೆ ಕೊಟ್ಟಿದ್ದರು. ನಮ್ಮ ಸರ್ಕಾರ ಬಂದರೆ ನಿಮಗೆ ಖಂಡಿತ ಎಲ್ಲ ಸೌಲಭ್ಯಗಳನ್ನು ಕೊಡುತ್ತೇವೆ ಎಂದು ಹೇಳಿದ್ದರು. ಅದಕ್ಕೆ ಈಗ ಬದ್ಧವಾಗಬೇಕಿದೆ ಅವರು ಕೊಟ ಮಾತನ್ನು ತಪ್ಪುವುದಿಲ್ಲ ಎಂಬ ಭರವಸೆ ನಮಗಿದೆ ಎಂದು ಹೇಳಿದರು.
ಇನ್ನು ಹಿಂದಿನ ಸರ್ಕಾರ ನೌಕರರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಬದಲಿಗೆ ಮುಷ್ಕರಕ್ಕೆ ಸರ್ಕಾರವೇ ಪ್ರಚೋದನೆ ಕೊಟ್ಟಿತು. ಬಳಿಕ ಸುಮಾರು 2500 ಮಂದಿಯನ್ನು ವಜಾ, ವರ್ಗಾವಣೆ ಅಮಾನತು ಮತ್ತು ಪೊಲೀಸ್‌ಕೇಸ್‌ಗಳನ್ನು ಹಾಕಿ ಜೈಲಿಗೂ ಕಳುಹಿಸಿತು. ಇಷ್ಟೆಲ್ಲ ಆದರೂ ಅಂದಿನ ಸರ್ಕಾರ ನಮಗೆ ಯಾವುದೇ ಸೌಲಭ್ಯಗಳನ್ನು ಕೊಡಲಿಲ್ಲ ಪರಿಣಾಮವನ್ನು ಈಗ ಆ ಪಕ್ಷದ ಮುಖಂಡರು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ.
ಈಗ ಕಾಂಗ್ರೆಸ್ ಸರ್ಕಾರ ಚುನಾವಣೆ ಪ್ರಣಾಳಿಕೆಯಂತೆ ನಮಗೆ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಈ ವೇದಿಕೆ ಮೂಲಕ ಒತ್ತಾಯಿಸುತ್ತಿದ್ದೇವೆ. ಇನ್ನು ರಾಜ್ಯದಲ್ಲಿ ಇರುವ 72 ನಿಗಮಗಳಲ್ಲೂ 4 ವರ್ಷಕ್ಕೊಮ್ಮೆ ಎಂಬ ಅಗ್ರಿಮೆಟ್‌ಇಲ್ಲ ವೇತನ ಆಯೋಗ ಮಾದರಿಯಲ್ಲೇ ವೇತನ ಹೆಚ್ಚಳವಾಗುತ್ತಿದೆ. ಅದೇ ನಮ್ಮಲ್ಲೂ ಆದರೆ ನೌಕರರು ಅನುಭವಿಸುವ ನೋವು ಕೊನೆಯಾಗುತ್ತದೆ ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು.
ಸಾರಿಗೆ ಸಚಿವರು ಸಹ ಕಾಲ ಕಾಲಕ್ಕೆ ನಿಗಮಗಳಿಗೆ ಬರಬೇಕಿರುವ ಅನುದಾನವನ್ನು ಕೊಡಿಸುತ್ತಿದ್ದೀರಾ, ಹೀಗಾಗಿ ಯಾಕೆ ಅಭಿನಂದನೆ ಮಾಡುತ್ತೀರಾ ಎಂದು ಕೇಳಿದರಿಗೆ ಈ ಮೂಲಕ ಉತ್ತರಕೊಡುತ್ತಿದ್ದೇವೆ. ಸಮಸ್ತ ಸಾರಿಗೆ ನೌಕರರಿಗೆ ಸಂಸ್ಥೆಗಳಿಗೆ ಹಾಗೂ ನಾಡಿನ ಜನತೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ನಡೆಯುತ್ತಿದೆ. ಅದನ್ನು ನಾವು ಮನಸ್ಸಾರ ಗೌರವಿಸಬೇಕು ಎಂದರು.
ಇನ್ನು ವೇತನ ವಿಷಯ ಬಂದರೆ ನಮಗೆ ದೊಡ್ಡ ಸಮಸ್ಯೆ ಆಗುತ್ತಿದೆ. ವೇತನ ಹೆಚ್ಚಳದ ವೇಳೆ ವೈಜ್ಞಾನಿಕವಾಗಿ ಮಾಸ್ಟರ್ ಪೇ ಸ್ಕೇಲ್ ಇಲ್ಲ. ಹೀಗಾಗಿ ನಮಗೆ ವೇತನ ಮಾದರಿಯಲ್ಲಿ ವೇತನ ಕೊಡಬೇಕು ಎಂಬುದರ ಬಗ್ಗೆ ಗಮನ ಕೊಡಬೇಕು. ನಾಮಗೆ ನೀವು ಏನಾದರೂ ಕೊಡಬೇಕು ಎಂದರೆ ಅದು ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಕೊಡಬೇಕು ಎಂದು ಒತ್ತಾಯಿಸಿದರು.
ಅಲ್ಲದೆ ಈ ಮೂಲಕ ನಾಲ್ಕು ವರ್ಷಕ್ಕೊಮ್ಮೆ ಆಗುತ್ತಿರುವ ಈ ಜಂಜಾಟವನ್ನು ತಪ್ಪಿಸಬೇಕು. ಇನ್ನು ನಮ್ಮ ಸಮಸ್ಯೆಯನ್ನು ಹೇಳಿಕೊಳ್ಳುವುದಕ್ಕೆ ಯಾವುದೇ ಮಾನ್ಯತೆ ಪಡೆದ ಸಂಘಟನೆ ಇಲ್ಲವಾಗಿದೆ. ಕಾರಣ ಚುನಾವಣೆ ನಡೆದಿಲ್ಲ. 1992ರಲ್ಲಿ ಚುನಾವಣೆ ಆಗಿರುವುದು ಬಿಟ್ಟರೆ ಇನ್ನೂ ಯಾವುದೇ ಚುನಾವಣೆ ಆಗಿಲ್ಲ. ಇದರಿಂದ ನೌಕರರಿಗೆ ವಿರುದ್ಧವಾಗಿ ಹೋಗುವ ಸಂಘಟನೆಗಳ ಮನವಿಯನ್ನು ಆಲಿಸದೆ ನೌಕರರ ಮನದಾಳದಂತೆ ವೇತನ ಕೊಡಬೇಕು. ಜತೆಗೆ ಸಂಘಟನೆಗಳ ಚುನಾವಣೆ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಇನ್ನು ನೌಕರರಿಗೆ ಉಚಿತ ಆರೋಗ್ಯ ಸೌಲಭ್ಯ ಕೊಡಬೇಕು. ಎಲೆಕ್ಟ್ರಿಕ್‌ಬಸ್‌ಗಳನ್ನು ತುಂಬಿಸಿಕೊಳ್ಳಲಾಗುತ್ತಿದೆ. ಆದರೆ ಇದು ಖಾಸಗೀಕರಣಕ್ಕೆ ಮುನ್ನುಡಿಯಾಗುತ್ತಿದೆ. ಇದನ್ನು ನಿಲ್ಲಿಸಿ ನಿಗಮದಿಂದಲೇ ನೇರ ನೇಮಕ ಮಾಡಿಕೊಳ್ಳಬೇಕು. ತಾರತಮ್ಯಗಳಿಲ್ಲದ ಸರಿ ಸಮಾನವೇತ ವೇತನ ನಮಗೆ ಕೊಡಬೇಕು ಎಂದು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಸಾರಿಗೆ ಸಚಿವರಲ್ಲಿ ನಿವೇದಿಸಿದರು.
Related
1 Comment
Leave a Reply Cancel reply
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...
ಬೇಡಿಕೆಗಳು ಮಾನ್ಯವಾದವುಗಳು. ಹೋದ ಮುಷ್ಕರದ ಸಮಯದಲ್ಲಿ ಕೆಲವು ಸಂಘಟನೆಗಳು ಈ ಬೇಡಿಕೆಗಳನ್ನು ವಿರೋದಿಸಿದ್ದವು. ಅದರ ಪ್ರತಿಫಲವೇ ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು ನೌಕರರಿಗೆ ಪಾವತಿಸಲು ಆಡಳಿತ/ ಸರ್ಕಾರ ಹಿಂದುಮುಂದು ನೋಡುತ್ತಾ ಆ ಹಿಂಬಾಕಿ ಮೊತ್ತವನ್ನು ನೌಕರರಿಗೆ ವಿತರಿಸದೇ ವಂಚಿಸುವ ಮಾರ್ಗವನ್ನು ಅನುಸರಿಸುತ್ತಿದೆ. ಹಾಗೂ ಆ ಸಮಯದಲ್ಲಿ ಈ ಬೇಡಿಕೆಗಳನ್ನು ವಿರೋದಿಸಿದ ಸಂಘಟನೆಗಳಿಗೆ ಇದರ ಬಗ್ಗೆ ಗಮನವೇ ಇಲ್ಲ.
ಈಗ ಸಾರಿಗೆ ನೌಕರರ ಅದರಲ್ಲೂ ಚಾಲನಾ ಸಿಬ್ಬಂದಿಗಳ ಮತ್ತು ಸರ್ಕಾರಿ ನೌಕರರ ಹಾಗೂ ನಿಗಮದ ಆಡಳಿತ ಸಿಬ್ಬಂದಿಗಳ (ಗಂಟೆಗಳ ಅವದಿಯಲ್ಲಿ ಕೆಲಸ ಮಾಡುವವರು) ವೇತನ ವ್ಯತ್ಯಾಸ ಮತ್ತು ಸೌಲಭ್ಯಗಳನ್ನು ಗಮನಿಸಿದರೆ ಅಜಗಜಾಂತರ ಇರುವುದು.