NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕ ಹೈಕೋರ್ಟ್ ನ್ಯಾ.ಸೋಮಶೇಖರ್ ಮಣಿಪುರ ಹೈಕೋರ್ಟ್ ಸಿಜೆಯಾಗಿ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಸಂವಿಧಾನದ 217ನೇ ವಿಧಿಯಡಿ ಪ್ರದತ್ತವಾದ ಅಧಿಕಾರ ಬಳಸಿ ರಾಷ್ಟ್ರಪತಿಗಳು ನ್ಯಾ.ಕೆ.ಸೋಮಶೇಖರ್ ಅವರನ್ನು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿದ್ದಾರೆ. ನ್ಯಾ.ಸೋಮಶೇಖರ್ ಅವರು ಅಧಿಕಾರ ಸ್ವೀಕರಿಸುವ ದಿನದಿಂದ ಈ ಅಧಿಸೂಚನೆ ಜಾರಿಗೆ ಬರಲಿದೆ ಎಂದು ಕೇಂದ್ರ ಕಾನೂನು ಸಚಿವಾಲಯದ ತಿಳಿಸಿದೆ.

ಇನ್ನು ಹಾಳಿ ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೃಷ್ಣಕುಮಾರ್ ಅವರು ಇದೇ ಮೇ 21ರಂದು ಅಂದರೆ ನಾಳೆ ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ನ್ಯಾ.ಕೆ.ಸೋಮಶೇಖರ್ ಅವರನ್ನು ಆ ಹುದ್ದೆಗೆ ನೇಮಕ ಮಾಡಲು ಮೇ 15ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ನಿರ್ಧರಿಸಿ, ಶಿಫಾರಸು ಮಾಡಿತ್ತು.

ನ್ಯಾ.ಸೋಮಶೇಖರ್ ಅವರು 1990ರ ಜನವರಿ 27ರಂದು ವಕೀಲರಾಗಿ ನೋಂದಾಯಿಸಿದ್ದು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ವಿಭಾಗದಲ್ಲಿ ಪ್ರಾಕ್ಟೀಸ್ ನಡೆಸಿದ್ದರು.

1998ರ ಜೂನ್ 17ರಂದು ನೇರವಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ವಿಜಯಪುರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ, ಆ ನಂತರ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲೂ ಸೇವೆ ಸಲ್ಲಿಸಿದ್ದಾರೆ.

ಹೈಕೋರ್ಟ್ನ ನ್ಯಾಯಾಂಗ ಮತ್ತು ವಿಚಕ್ಷಣಾ ರಿಜಿಸ್ಟ್ರಾರ್ ಆಗಿಯೂ ಕೆಲಸ ಮಾಡಿರುವ ನ್ಯಾ. ಸೋಮಶೇಖರ್, 2016ರ ನವೆಂಬರ್ 14ರಂದು ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು, 2018ರ ನವೆಂಬರ್ 3ರಲ್ಲಿ ಕಾಯಂಗೊಂಡಿದ್ದರು.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...