CrimeNEWSನಮ್ಮಜಿಲ್ಲೆ

KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕೆ ಹೊಡೆದ ಪರಿಣಾಮ ಆಕೆ ಕಾಲು ಮುರಿದಿರುವ ಘಟನೆ ನಗರದ ಬಸ್ ಟರ್ಮಿನಲ್ ಬಳಿ ನಡೆದಿದೆ.

ಘಟನೆಯ ವಿಡಿಯೋ ವೈರಲ್‌ ಆಗಿದ್ದು, ತುಮಕೂರಿನ ಬಸ್ ಟರ್ಮಿನಲ್ ಬಳಿ ರಸ್ತೆ ದಾಟುತ್ತಿದ್ದಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಬಸ್‌ ಬರುತ್ತಿರುವುದನ್ನು ಗಮನಿಸದೆ ಮಹಿಳೆ ರಸ್ತೆ ದಾಟುತ್ತಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಆಕೆಗೆ ಗುತ್ತಿದೆ. ಪರಿಣಾಮ ಕುಸಿದು ಬಿದ್ದ ಮಹಿಳೆಯನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಲು ಮುಂದಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಬಳಿಕ ತುಮಕೂರಿನ ತುರ್ತು ಸೇವೆ ಸಿಬ್ಬಂದಿ ಸ್ಥಳಕ್ಕೆ ಬಂದು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.

ಕರ್ನಾಟಕ ಪೋರ್ಟ್‌ ಪೋಲಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ವೈರಲ್‌ ಆಗಿದೆ. ಕೆಎಸ್ಆರ್ಟಿಸಿ ಬಸ್ ವೇಗವಾಗಿ ಚಲಿಸುತ್ತಿದ್ದಾಗ ಎದುರಿಗೆ ಬರುತ್ತಿದ್ದ ವಾಹನದ ಬಗ್ಗೆ ಅರಿವಿಲ್ಲದ ಮಹಿಳೆ ರಸ್ತೆ ದಾಟಲು ಮುಂದಾಗಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ವಿಡಿಯೋ ನೋಡಿದರೆ ಮಹಿಳೆ ಬಸ್‌ ಬರುವುದನ್ನು ಗಮನಿಸದಿರುವುದನ್ನು ಕಾಣ ಬಹುದು. ಅದರಂತೆ ಚಾಲಕ ಕೂಡ ಮಹಿಳೆ ರಸ್ತೆ ದಾಟುತ್ತಿರುವುದನ್ನು ಕೂಡ ಗಮನಿಸಿಲ್ಲ. ಹೀಗಾಗಿ ಬಸ್‌ ಆಕೆಗೆ ಡಿಕ್ಕಿ ಹೊಡೆದ್ದಿದ್ದರಿಂದ ಗಂಭೀರ ಗಾಯಗೊಂಡು ಆಕೆ ಕುಸಿದೇ ಬಿದ್ದಿರುವುದು ಅಪಘಾತದ ತೀವ್ರತೆಯನ್ನು ಹೇಳುತ್ತಿತ್ತು.

ಮಹಿಳೆಯ ಕಾಲು ಮೇಲೆ ಬಸ್‌ ಹರಿದಿರುವುದರಿಂದ ಒಂದು ಕಾಲಿಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಹಿಳೆ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ