ಔರಾದ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಔರಾದ್ ತಾಲೂಕಿನ ಜಮಲಾಪುರ ಕ್ರಾಸ್ ಬಳಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ.
ಔರಾದ್ ಘಟಕಕ್ಕೆ ಸೇರಿದ KA 38, F0882 ಬಸ್ ಔರಾದ್ದಿಂದ ಭಾಲ್ಕಿಗೆ ತೆರಳುತ್ತಿದ್ದ ವೇಳೆ ಕಮಲನಗರ ರಸ್ತೆಯಲ್ಲಿ ಈ ಘಟನೆ ಜರುಗಿದೆ.
ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಯವ ವೇಳೆ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಖಂಡೇಕೆರಿ ಗ್ರಾಮದ ವೃದ್ಧ ಸೋಪನರಾವ್ ಬಿರಾದಾರ ಹಾಗೂ ವಿದ್ಯಾರ್ಥಿ ನರಸಿಂಗ್ ಬಿರಾದಾರ ಗಾಯಗೊಂಡಿದ್ದು, ಅವರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಬಸ್ನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇಬ್ಬರಿಗೆ ಗಾಯವಾಗಿದೆ. ಉಳಿದ ಎಲ್ಲರೂ ತರಚಿದ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಔರಾದ್ ಘಟಕ ವ್ಯವಸ್ಥಾಪಕ ರಾಜೇಂದ್ರ ಪರಿಶೀಲನೆ ನಡೆಸಿ ಮೇಲಧಿಕಾರಿಗಳಿಗೆ ಮಾಗಿಹಿ ನೀಡಿದರು.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...