NEWSನಮ್ಮಜಿಲ್ಲೆ

ಮೈಸೂರಲ್ಲಿ ಸಾರಿಗೆ ಸಂಜೀವಿಜಿ ಮೊಬೈಲ್ ಸ್ಯಾನಿಟೈಸರ್ ಬಸ್‍ಗಳು

ಸಿಬ್ಬಂದಿ ಅನುಕೂಲಕ್ಕಾಗಿ ಎರಡು ಸ್ಯಾನಿಟೈಸರ್ ಬಸ್‍ಗಳಾಗಿ ಪರಿವರ್ತನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಮೈಸೂರು ಗ್ರಾಮಾಂತರ ಹಾಗೂ ನಗರ ವಿಭಾಗದ ವತಿಯಿಂದ `ಸಾರಿಗೆ ಸಂಜೀವಿನಿ’ ಮೊಬೈಲ್ ಸ್ಯಾನಿಟೈಸರ್ ಬಸ್‍ಗಳಿಗೆ ಚಾಲನೆ ನೀಡಲಾಯಿತು.

ಮೊಬೈಲ್ ಸ್ಯಾನಿಟೈಸರ್ ಬಸ್‍ಗಳಿಗೆ ಚಾಲನೆ ನೀಡಿದ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ನಿರ್ದೇಶಕ ಡಾ.ರಾಮನಿವಾಸ ಸೆಪಟ್ ಅವರು ಮಾತನಾಡಿ, ಕೆಎಸ್‍ಆರ್‍ಟಿಸಿ ಸಿಬ್ಬಂದಿ ಅನುಕೂಲಕ್ಕಾಗಿ ಎರಡು ಬಸ್‍ಗಳನ್ನು ಸ್ಯಾನಿಟೈಸರ್ ಬಸ್‍ಗಳಾಗಿ ಪರಿವರ್ತಿಸಲಾಗಿದೆ. ನಮ್ಮಲ್ಲಿ ಸಾಕಷ್ಟು ಹಳೆಯ ಬಸ್‍ಗಳಿದ್ದು, ಜಿಲ್ಲಾಡಳಿತದ ಸೂಚನೆ ಮೇರೆಗೆ ಸ್ಯಾನಿಟೈಸರ್ ಬಸ್‍ಗಳಾಗಿ ಪರಿವರ್ತಿಸಲಾಗುತ್ತದೆ ಎಂದು ತಿಳಿಸಿದರು.

ಕೆಎಸ್‍ಆರ್‍ಟಿಸಿಯ ವಿನೂತನ ಪ್ರಯತ್ನದಿಂದ ಹಳೆಯ ಬಸ್‍ಗಳು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತನೆ ಆಗಿವೆ. ಇದಕ್ಕೆ `ಸಾರಿಗೆ ಸಂಜೀವಿನಿ’ ಎಂಬ ಹೆಸರಿನಲ್ಲಿ ಸ್ಯಾನಿಟೈಸರ್ ವಿನ್ಯಾಸ ಮಾಡಲಾಗಿದೆ. ಇದರಂತೆ ರೈಲ್ವೆ ಬೋಗಿಗಳು ಐಸೋಲೇಷನ್ ವಾರ್ಡ್‍ಗಳಾಗಿ ಪರಿವರ್ತನೆ ಆಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿ ವಾಹನದಲ್ಲಿ 200 ಲೀ. ನೀರು, 12 ಸ್ಪ್ರಿಂಕ್ಲರ್ ಅಳವಡಿಸಿದ್ದು, ಪ್ರತಿ ವಾಹನಕ್ಕೆ ಅಂದಾಜು 20 ಸಾವಿರ ರೂ. ವೆಚ್ಚವಾಗಿದೆ. ಈ ಬಸ್ಸುಗಳಲ್ಲಿ ಮುಂದಿನ ಭಾಗಿಲಿನಲ್ಲಿ ಪ್ರವೇಶಿಸಿ, ಹಿಂದಿನ ಬಾಗಿಲಲ್ಲಿ ನಿರ್ಗಮಿಸಿದರೆ, ದೇಹಕ್ಕೆ ಸಂಪೂರ್ಣವಾಗಿ ವೈರಾಣು ನಿರೋಧಕ ದ್ರಾವಣ ಸಿಂಪಡಣೆಯಾಗಲಿದೆ.

ಸದ್ಯಕ್ಕೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಪೌರ ಕಾರ್ಮಿಕರು ಹಾಗೂ ಇತರೆ ಇಲಾಖೆ ಸಿಬ್ಬಂದಿ ಅನುಕೂಲಕ್ಕಾಗಿ ಬಸ್ ಚಾಲನೆ ನೀಡಲಾಗಿದೆ. ಲಾಕ್‍ಡೌನ್ ಮುಗಿದು ಬಸ್ ಸಂಚಾರ ಪುನಾರಂಭಗೊಂಡ ನಂತರ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣದಲ್ಲಿ ಈ ವಾಹನಗಳನ್ನು ನಿಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ