NEWSನಮ್ಮಜಿಲ್ಲೆ

ಬಾಪೂಜಿ ಪ್ರಬಂಧ ಸ್ಪರ್ಧೆಃ ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ್‌ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.

ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತಾ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ.

ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಚ್.ಎನ್. ಇಂಚರ ದ್ವೀತಿಯ, ತುಮಕೂರು ದಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆರ್. ವೆಂಕಟ್ ತೇಜ್ ತೃತೀಯ ಸ್ಥಾನ.

ಪದವಿ ವಿಭಾಗದಿಂದ ತುಮಕೂರು ವಿಶ್ವವಿದ್ಯಾಲಯದ ಎಂಎ ಪ್ರಥಮ ವರ್ಷದ ಶರಣಪ್ಪ ಪ್ರಥಮ, ಎಸ್.ಕೆ. ಸುಪ್ರೀತ ದ್ವಿತೀಯ, ಎಚ್.ಡಿ. ಸಂತೋಷ್ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ವಾರ್ತಾ ಇಲಾಖೆಯ ಅಧಿಕಾರಿ ಹಿಮಂತರಾಜು ಜಿ. ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ