NEWSನಮ್ಮಜಿಲ್ಲೆನಮ್ಮರಾಜ್ಯ

ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಿಣಿದಾರರ 81ನೇ ಮಾಸಿಕ ಸಭೆ ಇದೇ ಅ.6ರ ಭಾನುವಾರದಂದು ಬೆಳಗ್ಗೆ 8ಗಂಟೆಗೆ ಲಾಲ್ ಬಾಗ್ ಆವರಣದಲ್ಲಿ ಜರುಗಲಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಸೆಪ್ಟೆಂಬರ್ 27ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪಿಎಫ್ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ ಅಭೂತಪೂರ್ವ ಪ್ರತಿಭಟನಾ ಸಭೆ ಹಾಗೂ ಮನವಿ ಸಲ್ಲಿಸುವ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾವಿರಾರು ನಿವೃತ್ತರು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದು, ಇದಕ್ಕೆ ಕಾರಣೀಭೂತರಾದವರಿಗೆ ಎನ್ಎಸಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆಗಳು.

ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಇಪಿಎಸ್ ಪಿಂಚಣಿದಾರರ ಹೋರಾಟ ದಿನಕಳದಂತೆ ತೀವ್ರಗೊಳ್ಳುತ್ತಿದೆ. ಕಳದೊಂದು ತಿಂಗಳಿನಿಂದ ನಡೆಸಿದ ಪ್ರತಿಭಟನೆ, ಈಗ ಒಂದು ಹಂತಕ್ಕೆ ಬಂದು ನಿಂತಿದೆ.

ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ (minister for labour & employment) ಮುನ್ಸೂಖ್ ಮಂಡವೀಯ ಅವರು ಇತ್ತೀಚಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿ, ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಸರ್ವೋಚ್ಚ ನ್ಯಾಯಾಲಯವು ನೀಡಿರುವ ತೀರ್ಪು, ಈ ಎರಡು ಅಂಶಗಳು ತಮ್ಮ ಮುಂದಿದ್ದು, ಬರುವ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಇತ್ಯರ್ಥ ಪಡಿಸುವುದಾಗಿ ತಿಳಿಸಿದ್ದು, ಇಪಿಎಸ್ ನಿವೃತ್ತರದಲ್ಲಿ ಭರವಸೆ ಮೂಡಿಸಿದೆ.

ಅಕ್ಟೋಬರ್ 01, 2024 ರಂದು ಮಹಾರಾಷ್ಟ್ರದ ಅಜಾದ್ ಮೈದಾನದಲ್ಲಿ ಎನ್ಎಸಿ ವತಿಯಿಂದ ಆಯೋಜಿಸಿದ್ದ, ಪ್ರತಿಭಟನಾ ಸಭೆಯಲ್ಲಿ ಸುಮಾರು 5 ಸಾವಿರ ಇಪಿಎಸ್ ನಿವೃತ್ತರು ಭಾಗವಹಿಸಿದ್ದು, ದೇಶಾದ್ಯಂತ ರಣಕಹಳೆಯನ್ನು ಮೊಳಗಿಸಿದ್ದಾರೆ.

ನಮ್ಮ ಮುಖಂಡರು ದೆಹಲಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಇಪಿಎಫ್ಒ ಅಧಿಕಾರಗಳನ್ನು ಭೇಟಿ ಮಾಡಿ, ಚರ್ಚಿಸಿದ ಎಲ್ಲ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ಈ ಮಾಸಿಕ ಸಭೆಯಲ್ಲಿ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿ ಪ್ರಸ್ತುತಪಡಿಸಲಿದ್ದಾರೆ. ಜತೆಗೆ ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ, ಕ್ಷೇಮಾಭಿವೃದ್ಧಿ ಸಂಘದ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದು, ನಮ್ಮ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸೋಣ.

ಇನ್ನು ಅಕ್ಟೋಬರ್ 13ರ ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ನಮ್ಮ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ, ಶ್ರೀ ಸೌಮ್ಯನಾಥ ಸ್ವಾಮೀಜಿರವರ ಆಶೀರ್ವಚನಗಳೊಂದಿಗೆ ಪ್ರಾರಂಭವಾಗಲಿದೆ.

ವಕೀಲರಾದ ವಿ.ಎಸ್.ನಾಯಕ್ ಅವರು ಉದ್ಘಾಟನಾ ಭಾಷಣ ಮಾಡಲಿದ್ದು, ಇವರು ನ್ಯಾಯಾಲಯದ ಇಪಿಎಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಣಿತರಿದ್ದು, ಸಾವಿರಾರು ಪಿಂಚಣಿ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿದ್ದು, ಸಂಪೂರ್ಣ ಮಾಹಿತಿಯನ್ನು ಸಭೆಯಲ್ಲಿ ಪ್ರಸ್ತುತಪಡಿಸಲಿದ್ದಾರೆ.

ಹೀಗಾಗಿ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಮೇಲ್ಕಂಡ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರು 6/10/2024 ರಂದು ಬೆಳಗ್ಗೆ 08 ಗಂಟೆಗೆ ಹಾಜರಾಗಬೇಕೆಂದು ನಂಜುಂಡೇಗೌಡ ವಿನಂತಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು