ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ನಾಳೆ ಅಂದರೆ ಅ.9ರ ಬುಧವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಸಂಘಟನೆಗಳು ಮುಖಂಡರ ಸಭೆಯಲ್ಲಿ ವಿಧಾನಸಭಾ ಚುನಾವಣೆಯ ವೇಳೆ ನೀವೆ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆ ಈಡೇರಿಸುವ ನಿಟ್ಟನಲ್ಲಿ ಚರ್ಚೆ ಮಾಡಬೇಕು ಎಂದು KSRTC ಅಧ್ಯಕ್ಷ ಶ್ರೀನಿವಾಸ್ ಅವರಿಗೆ ಒಕ್ಕೂಟದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು.
ಇಂದು ಅವರ ಕಚೇರಿಯಲ್ಲಿ ಭೇಟಿ ಮಾಡಿದ ಪದಾಧಿಕಾರಿಗಳಿಂದ ಮನವಿ ಪತ್ರ ಸ್ವೀಕರಿಸಿದ ಅಧ್ಯಕ್ಷರು ಮಾತನಾಡಿ, ನಾವು ಈ ಹಿಂದೆ ನಮ್ಮ ಸರ್ಕಾರ ಇಲ್ಲದಿದ್ದಾಗಲು ನಿಮ್ಮ ಸಮಸ್ಯೆ ಹಾಗೂ ವೇತನ ತಾರತಮ್ಯದ ಬಗ್ಗೆ ಧ್ವನಿ ಎತ್ತಿದ್ದೆವು. ಈಗ ನಮಗೆ ಅಧಿಕಾರವಿದೆ. ಹೀಗಾಗಿ ನಿಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಚಿವರ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಈ ಹಿಂದಿನಿಂದಲೂ ವೇತನ ಸಂಬಂಧ ನಾಲ್ಕು ವರ್ಷಕ್ಕೊಮ್ಮೆ ಮುಷ್ಕರ ಮಾಡಿ ನೂರಾರು ನೌಕರರು ಕೆಲಸ ಕಳೆದುಕೊಳ್ಳುತ್ತಿರುವುದು ನಮಗೆ ಗೊತ್ತಿದೆ. ಹೀಗಾಗಿ ಮುಂದೆ ಈ ರೀತಿಯ ಸಮಸ್ಯೆ ಅಗದಂತ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ತೆಗದುಕೊಳ್ಳುತ್ತೇವೆ ಅದ್ದರಿಂದ ಯಾರು ಗೊಂದಲಕ್ಕೆ ಒಳಗಾಗುವುದು ಎಂದು ಭರವಸೆ ನೀಡಿರುವುದಾಗಿ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.
ನೌಕರರು ಕೂಡ ಈ ಬಗ್ಗೆ ತಮ್ಮ ನೋವನ್ನು ತೋಡಿಕೊಂಡಿದ್ದು ಸಾರಿಗೆ ಸಂಸ್ಥೆಯಲ್ಲಿ ದುಡಿಯುವ ನೌಕರರಿಗೆ ನೆಮ್ಮದಿ ಇಲ್ಲ, ವೇತನ ತಾರತಮ್ಯತೆಯನ್ನು ಈವರೆಗೂ ಅಧಿಕಾರಕ್ಕೆ ಬಂದಿರುವ ಯಾವುದೇ ಸರ್ಕಾರ ಬಗೆಹರಿಸಿಲ್ಲ ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಾದರೂ ನಮ್ಮ ಈ ವೇತನ ತಾರತಮ್ಯತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
ಈಗಾಗಲೇ ವಿಧಾನಸಭಾ ಚುನಾವಣೆಯ ವೇಳೆ ನೀವೆ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ನಮಗೂ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ವೇತನ ಆಯೋಗ ಮಾದರಿಯಲ್ಲೇ ಕೊಡುವ ಮೂಲಕ ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಅಧಿಕಾರಿಗಳು/ನೌಕರರಿಗೂ ಸಿಗಬೇಕಿರುವ ಎಲ್ಲ ಸೌಲಭ್ಯಗಳನ್ನು ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಈ ಹಿಂದಿನ ಎಲ್ಲ ಸರ್ಕಾರಗಳು ಕೂಡ ಹಳೇ ಕಾಲದರೀತಿಯಲ್ಲಿಯೇ KSRTC Employeesಗೆ ಅನ್ಯಾಯ ಮಾಡಿಕೊಂಡು ಬಂದಿವೆ. ದೇಶದಲ್ಲಿ ನೂರಾರು ಪ್ರಶಸ್ತಿ ಪದಕಗಳನ್ನು ತಮ್ಮ ಮುಡಿಗೆ ಏರಿಸಿಕೊಳ್ಳುವ ಮೂಲಕ ಮೊದಲ ಸ್ಥಾನದಲ್ಲಿ ಗುರುತಿಸಿ ಕೊಂಡಿದ್ದರೂ ನಮಗೆ ಆರ್ಥಿಕವಾಗಿ ಸಿಗಬೇಕಿರುವ ಸೌಲಭ್ಯ ಸಿಕ್ಕಿಲ್ಲ.
ಇನ್ನಾದರೂ ಇದಕ್ಕೆ ಕೊನೆಯಾಡಿ ನಮಗೆ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ (ಅ.9) ನಡೆಯುವ ಸಭೆಯಲ್ಲಾದರೂ ಪರಿಹಾರ ನೀಡಲು ಸರ್ಕಾರ ಸಮರ್ಥವಾಗಿದೆ ಎಂದು ತಿಳಿಸಿ ಸಮಸ್ಯೆ ಬಗೆ ಹರಿಸಲು ಮುಂದಾಗಬೇಕು ಎಂದು ನೌಕರರು ಮನವಿ ಮಾಡಿದ್ದಾರೆ. ಇದೇ ಬೇಡಿಕೆಯನ್ನು ಅಧ್ಯಕ್ಷರ ಮುಂದೆ ಸಾರಿಗೆ ನೌಕರರ ಒಕ್ಕೂಟ ಇಟ್ಟಿದೆ. ಅದಕ್ಕೆ ಅಧ್ಯಕ್ಷರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.