NEWSನಮ್ಮಜಿಲ್ಲೆನಮ್ಮರಾಜ್ಯ

KSRTC 4ನಿಗಮಗಳ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಕೊಡುವತ್ತ ಸರ್ಕಾರದ ಚಿತ್ತ!

ವಿಜಯಪಥ ಸಮಗ್ರ ಸುದ್ದಿ
  • ನವೆಂಬರ್‌ ಒಳಗೆ ನಿವೃತ್ತ ನೌಕರರಿಗೆ ಕೊಡಬೇಕರಿವುದು ಸಂದಾಯ
  • ಸಿಎಂ ಜತೆ ಚರ್ಚಿಸಿ ಸರಿಸಮಾನ ವೇತನದ ನಿರ್ಧಾರ
  • ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ
  • ಸರ್ಕಾರದ ನಿರ್ಧಾರದಿಂದ ಕೆಲ ಸಂಘಟನೆಗಳ ಮುಖಂಡರಿಗೆ ಬೇಸರ
  • ಇನ್ನು ಕೆಲ ಸಂಘಟನೆಗಳ ಮುಖಂಡರಿಗೆ ಸಂತಸ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನಿವೃತ್ತ ನೌಕರರಿಗೆ (2020 ಜನವರಿ 1ರಿಂದ 2023 ಫೆಬ್ರವರಿ 28) ಕೊಡಬೇಕಿರುವ ಗ್ರಾಚ್ಯುಟಿ, ರಜೆ ನಗಧೀಕರಣ ಸೇರಿದಂತೆ ಇತರ ಎಲ್ಲವುಗಳನ್ನು ನವೆಂಬರ್‌ ತಿಂಗಳ ಒಳಗಾಗಿ ಕೊಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ನಡೆದ ಸಾರಿಗೆ ನೌಕರರ ಪರ ಸಂಘಟನೆಗಳ ಸಭೆಯ ಅಧ್ಯಕ್ಷತೆಯಲ್ಲಿ ಮಾತನಾಡಿದ ಅವರು, ನೌಕರರಿಗೆ ನ್ಯಾಯಯುತವಾಗಿ ಸಿಗಬೇಕಿರುವ ಸೌಲಭ್ಯಗಳನ್ನು ನಮ್ಮ ಸರ್ಕಾರ ಕೊಡುವುದಕ್ಕೆ ಹಿಂದೆ ಮುಂದೆ ನೋಡುವುದಿಲ್ಲ ನಾವು ನೌಕರರ ಬೇಡಿಕೆಗಳನ್ನು ಗಮನಿಸಿದ್ದು ನಾವು ಕೂಡ ಎಲ್ಲ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನ ಪಡುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮುಖ್ಯವಾಗಿ ಕೂಡಲೇ ಅಂದರೆ ಒಂದು ತಿಂಗಳ ಒಳಗಾಗಿ ಸುಮಾರು 11 ಸಾವಿರ ನಿವೃತ್ತ ನೌಕರರಿಗೆ (2020-2023 ಮತ್ತು ನಂತರ ನಿವೃತ್ತರಾದ ಎಲ್ಲ ನೌಕರರಿಗೂ) ಸಿಗಬೇಕಿರುವ ಸೌಲಭ್ಯಗಳನ್ನು ಕೊಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ.

ಆದರೆ, ಹಾಲಿ ಕರ್ತವ್ಯದಲ್ಲಿರುವ ನೌಕರರಿಗೆ ಆಗುತ್ತಿರುವ 4 ವರ್ಷಕ್ಕೊಮ್ಮೆಯ ವೇತನ ಬಗೆಗಿನ ಹೋರಾಟಕ್ಕೆ ಪೂರ್ಣ ವಿರಾಮ ನೀಡುವ ನಿಟ್ಟಿಲ್ಲಿ ನಮ್ಮ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿದೆ. ಈ ಬಗ್ಗೆ ನೌಕರರಿಗಾಗಲಿ ಅಥವಾ ನೌಕರರ ಪರ ಸಂಘಟನೆಗಳಿಗಾಗಲಿ ಯಾವುದೇ ಗೊಂದಲ ಬೇಡ ಎಂದು ಸಭೆಯಲ್ಲಿ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ನೌಕರರ ಸಂಘಟನೆಗಳಲ್ಲಿ ಕೆಲ ಸಂಘಟನೆಗಳ ಮುಖಂಡರು ಸರಿ ಸಮಾನ ವೇತನ ಬೇಡ ಇದರಿಂದ ನೌಕರರಿಗೆ ಆರ್ಥಿಕವಾಗಿ ನಷ್ಟವಾಗುತ್ತದೆ. ಹೀಗಾಗಿ 4 ವರ್ಷಕ್ಕೊಮ್ಮೆ ಆಗುತ್ತಿರುವ ವೇತನ ಪರಿಷ್ಕರಣೆಯನ್ನೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. ಅದಕ್ಕೆ ಸಚಿವರು ಈ ಬಗ್ಗೆ ನೌಕರರಲ್ಲಿ ಅಸಮಾಧಾನವಿದೆ ಆದ್ದರಿಂದ ನಾವು ಚುನಾವಣೆಯಲ್ಲಿ ಕೊಟ್ಟಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗಮನಹರಿಸುತ್ತಿದ್ದೇವೆ ಎಂದು ಪರೋಕ್ಷವಾಗಿ ಸೂಕ್ಷ್ಮವಾಗಿ ತಿಳಿಸಿದ್ದಾರೆ.

ಇದಕ್ಕೆ ಇಲ್ಲ 2024ರ ವೇತನ ಪರಿಷ್ಕರಣೆ ಆಗಲೇ ಬೇಕು ಎಂದು ಮನವಿ ಮಾಡಿದ್ದಾರೆ. ಅದಕ್ಕೆ ಸರ್ಕಾರ ಸ್ಪಂದಿಸಲ್ಲ ಕಾರಣ ಬಹುತೇಕ ನೌಕರರು ಮತ್ತು ಪ್ರಸ್ತುತ ಅಧಿಕಾರಿಗಳು ಕೂಡ ಹಲವು ದಶಕಗಳ ಬಳಿಕ ಅಂದರೆ 7ನೇ ವೇತನ ಆಯೋಗ ಮಾದರಿಯಲ್ಲೇ ನಮಗೂ ವೇತನ ಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ನಾವು ಅಧಿಕಾರಿಗಳು/ನೌಕರರ ಬೇಡಿಕೆಗೆ ಸ್ಪಂದಿಸುವುದು ನ್ಯಾಯವಲ್ಲವೇ ಎಂದು ಸಂಘಟನೆಗಳ ಮುಖಂಡರಿಗೆ ಪ್ರಶ್ನೆ ಮಾಡಿದ್ದಾಋೆ. ಆದರೆ ಅದಕ್ಕೆ ಮುಖಂಡರಿಂದ ಸಮಂಜಸವಾದ ಉತ್ತರ ಬರಲಿಲ್ಲ ಎಂದು ತಿಳಿದು ಬಂದಿದೆ.

ಇನ್ನು ಸರ್ಕಾರಿ ನೌಕರರಿಗೆ ಸರಿ ಸಮಾನವಾದ ಅಂದರೆ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಜತೆಗೆ ನೀವೆ ಕೊಟ್ಟಿರುವ ಭರವಸೆಯನ್ನು ಈಡೇರಿಸಬೇಕು ಎಂದು ಕೇಳಿದ್ದಾರೆ. ಅದಕ್ಕೆ ಸಾರಿಗೆ ಸಚಿವರು ಖುಷಿಯಿಂದ ಈ ಬಗ್ಗೆ ದಸರಾ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.

ಹೀಗಾಗಿ ಹಲವು ದಶಕಗಳಿಂದ ಅಧಿಕಾರಿಗಳು ಮತ್ತು ನೌಕರರನ್ನು ಕಾಡುತ್ತಿದ್ದ ವೇತನ ಸಮಸ್ಯೆಗೆ ಅತೀ ಶೀಘ್ರದಲ್ಲೇ ಪೂರ್ಣವಿರಾಮ ಬೀಳುವುದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಚಿವರು ತಿಳಿಸಿದ್ದಾರೆ. ಆದ್ದರಿಂದ ನೌಕರರಿಗೆ ಮುಂದಿನ ದಿನಗಳಲ್ಲಿ ಸಿಹಿ ಸುದ್ದಿ ಸಿಗುವುದರಲ್ಲಿ ಯಾವುದೇ ಡೌಟ್‌ ಇಲ್ಲ ಎಂದು ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು