NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ ಬೀಡನಹಳ್ಳಿಯಲ್ಲಿ ಚಾಮುಂಡೇಶ್ವರಿ ಹಬ್ಬ: ಸಂಭ್ರಮಾಚರಣೆಗೆ ಗ್ರಾಮಸ್ಥರು ಸಜ್ಜು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೀಡನಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವು ಅ.10ರ ಶುಕ್ರವಾರ ಅಂದರೆ ನಾಳೆ ತಾಯಿ ಚಾಮುಂಡೇಶ್ವರಿ ಹಬ್ಬ ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದಲ್ಲಿ ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಅಂದರೆ ನಾಳೆ ಹಬ್ಬ ಆಚರಣೆಗೆ ಗ್ರಾಮಸ್ಥರು ಸಜ್ಜಾಗಿದ್ದಾರೆ.

ಬೀಡನಹಳ್ಳಿಯಲ್ಲಿ ಚಾಮುಂಡೇಶ್ವರಿ ಹಬ್ಬದ ಅಂಗವಾಗಿ ಕಳೆದ ಶುಕ್ರವಾರ ಗಂಗೆ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನಾ 3-4ದಿನಗಳಿಂದ ಗ್ರಾಮಸ್ಥರು ಮನೆಯನ್ನು ಸ್ವಚ್ಛಗೊಳಿಸುವ ಸುಣ್ಣ-ಬಣ್ಣ ಬಳಿಯುವ ಮೂಲಕ ಮನೆಯಲ್ಲಿ ಹಬ್ಬದ ವಾತಾವರಣವನ್ನು ಹೆಚ್ಚಿಸಿದ್ದಾರೆ.

ಇನ್ನು ಹಬ್ಬದ ಅಂಗವಾಗಿ ನಾಳೆ ಗ್ರಾಮದ ಹೆಂಗಳೆಯರು ತಂಬಿಟ್ಟಿನ ಆರತಿಯೊಂದಿಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನೆರವೇರಿಸುವರು. ಈ ವೇಳೆ ಬಂಧು ಬಳಗ, ಸ್ನೇಹಿತರು ಸೇರಿದಂತೆ ಆಪ್ತರನ್ನು ಹಬ್ಬಕ್ಕೆ ಆಹ್ವಾನಿಸುವುದು ರೂಢಿ. ಆದರೆ, ಇತ್ತೀಚಿನ ದಿನಗಳಲ್ಲಿ ಹಬ್ಬಕ್ಕೆ ಹೆಣ್ಣುಮಕ್ಕಳು ಮತ್ತು ಹೊಸ ಸಂಬಂಧಿಕರಿಗಷ್ಟೇ ಆಹ್ವಾನ ನೀಡುವುದು ಸಮಾನ್ಯವಾಗಿದೆ.

ನಾಳೆ ಅ.10 ರಂದು ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ, ಸಮೇತ ಮಾರಮ್ಮ, ಮುತ್ತತ್ತಿರಾಯನ ಪೂಜೆ ಹೊತ್ತು ಬೀಡನಹಳ್ಳಿ ಗ್ರಾಮದ ರಾಜ ಬೀದಿಗಳಲ್ಲಿ ಸಾಗಿ ತಾಯಿ ಚಾಮುಂಡೇಶ್ವರಿ ದೇವಾಲಯ ತಲುಪಿ ಪೂಜೆ ನೆರವೇರಿಸಲಾಗುವುದು.

ಇದಕ್ಕೂ ಮುನ್ನಾ ಬನ್ನೂರು ಹೆಗ್ಗೆರೆಯಿಂದ ಮತ್ತೆ ಹೂ ಹೊಂಬಾಳೆಯಾಗಿ ಬರುವ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಪೂಜೆಯೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ತೀರ್ಥ ಸಂಪ್ರೊಕ್ಷಣೆ ಮಾಡಿದ ಬಳಿಕ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಲಾಗುವುದು.

ಇನ್ನು ಗ್ರಾಮವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ದೇವಸ್ಥಾನ ಮತ್ತು ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಗಳು ಜಗಮಗಿಸುತ್ತಿವೆ. ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಯಾದ ಬಳಿಕ ನವರಾತ್ರಿಯ ಮೊದಲ ಶುಕ್ರವಾರ ಗ್ರಾಮದಲ್ಲಿ ಹಬ್ಬ ಆಚರಣೆ ಸಾಂಪ್ರದಾಯಕವಾಗಿ ಮಾಡಿಕೊಂಡು ಬರಲಾಗುತ್ತಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ