CrimeNEWSನಮ್ಮರಾಜ್ಯ

ಮೈಸೂರು- ದರ್ಭಾಂಗ್​ ಎಕ್ಸ್‌ಪ್ರೆಸ್‌ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ: 19ಮಂದಿ ಗಂಭೀರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿರುವಳ್ಳೂರು: ತಮಿಳುನಾಡಿನ ತಿರುವಳ್ಳೂರಿನ ಬಳಿ ಮೈಸೂರು- ದರ್ಭಾಂಗ್​ ಎಕ್ಸ್‌ಪ್ರೆಸ್‌ ರೈಲು ಮತ್ತು ಗೂಡ್ಸ್ ಟ್ರೈನ್ ಡಿಕ್ಕಿಯಾಗಿ ಭಾರೀ ಅನಾಹುತ ಸಂಭವಿಸಿದೆ. ದುರ್ಘಟನೆಯಲ್ಲಿ 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದು 50 ಕ್ಕೂ ಪ್ರಯಾಣಿಕಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಸದ್ಯ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಯನ್ನು ಮಾಡಲಾಗುತ್ತಿದೆ. ಒಟ್ಟು 45 ಮಂದಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಈ ಸಂಬಂಧ ಮಾತನಾಡಿದ್ದು, ರೈಲು ಅಪಘಾತದಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರೂ ಔಟ್ ಆಫ್ ಡೇಂಜರ್. ಅದೃಷ್ಟವಶಾತ್ ಯಾವ ಸಾವು-ನೋವು ಆಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನು 13 ಬೋಗಿಗಳು ಹಳಿ ತಪ್ಪಿರುವ ಬಗ್ಗೆ ಮಾಹಿತಿ ಇದೆ. ತುಂಬಾ ಒಳ್ಳೆಯ ದಿನ, ಈ ಅಪಘಾತದಲ್ಲಿ ದೊಡ್ಡ ಅನಾಹುತ ಆಗಿಲ್ಲ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ಉಳಿಯುವ ವ್ಯವಸ್ಥೆ ಮಾಡಲಾಗಿದೆ. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯಿತು ಎಂದು ತನಿಖೆ ಆಗಬೇಕಿದೆ, ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ