NEWSದೇಶ-ವಿದೇಶನಮ್ಮರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ: 415ನೇ ಜಂಬೂಸವಾರಿಗೆ ಕ್ಷಣಗಣನೆ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶದಿಂದ ಲಕ್ಷಾಂತರ ಜನರು 415ನೇ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತರಿದಿಂದ ಕಾಯುತ್ತಿದ್ದಾರೆ.

ಇನ್ನು ಕ್ಯಾಪ್ಟನ್ ಅಭಿಮನ್ಯು ಐದನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲು ರೆಡಿಯಾಗಿದ್ದಾನೆ. ಇಂದು ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡ್ಲಿದ್ದಾರೆ.

ಜಂಬೂಸವಾರಿ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಕೊಡಗು ಸಂಸದ ಹಾಗೂ ರಾಜವಂಶಸ್ಥರಾದ ಯದುವೀರ್ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹಾದೇವಪ್ಪ, ಸಾಥ್ ನೀಡಲಿದ್ದಾರೆ.

ಇನ್ನು, ಚಿನ್ನದ ಅಂಬಾರಿ ಹೊತ್ತು ಸಾಗೋ ಕ್ಯಾಪ್ಟನ್ ಅಭಿಮನ್ಯುವಿಗೆ ಲಕ್ಷ್ಮೀ, ಹಿರಣ್ಯ ಕುಮ್ಕಿ ಆನೆಗಳಾಗಿ ಸಾಥ್ ನೀಡಿದರೆ, ಧನಂಜಯ ನಿಶಾನೆ ಆನೆಯಾಗಲಿದ್ದಾನೆ. ಗೋಪಿ ನೌಪತ್ ಆನೆಯಾಗಲಿದ್ದು 9 ಆನೆಗಳು ದಸರಾ ಮೆರವಣಿಗೆಯಲ್ಲಿ ಸಾಗಲಿವೆ.

140ಕ್ಕೂ ಹೆಚ್ಚು ಕಲಾತಂಡ ಹಾಗೂ 51 ಸ್ತಬ್ಧ ಚಿತ್ರ: ವಿವಿಧ ಜಿಲ್ಲೆಗಳ ಕಲಾತಂಡಗಳು, ಕಿಲುಕುದುರೆ, ಗೊರವರ ಕುಣಿತ, ಡೊಳ್ಳು ಕುಣಿತ, ಯಕ್ಷಗಾನ, ಕೀಲುಗೊಂಬೆ, ಮರಗಾಲು, ವೀರಗಾಸೆ, ಹಾಡಿ ಮಕ್ಕಳ ಕುಣಿತ ಸೇರಿ 140ಕ್ಕೂ ಹೆಚ್ಚು ಕಲಾ ತಂಡಗಳು ಹಾಗೂ 51 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ.

ಇನ್ನು, ಜಂಬೂ ಸವಾರಿ ನಿಮಿತ್ತ ನಗರದಾದ್ಯಂತ ಬಿಗಿ ಪೊಲೀಸ್ ಬದೋಬಸ್ತ್‌ ಮಾಡಲಾಗಿದ್ದು ಅರಮನೆ ಸುತ್ತಮುತ್ತ ಹಾಗೂ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಹದ್ದಿನ ಕಣ್ಣಿಡಲಾಗಿದೆ. ನವರರಾತ್ರಿ ಕಳೆದಿದ್ದು ಇನ್ನೇನಿದ್ದರು ಐತಿಹಾಸಿಕ 415ನೇ ಜಂಬೂ ಸವಾರಿಯ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಂಡರೆ ಪೂರ್ಣವಾಗಲಿದೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ